ಚಿಕ್ಕಮಗಳೂರು:ಪ್ರಯಾಣಿಸುತ್ತಿದ್ದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಕೆಗೆ ಮಹಿಳಾ ಕಂಡಕ್ಟರ್​ ಬಸ್​ನಲ್ಲೇ ಹೆರಿಗೆ ಮಾಡಿಸಿದ ಅಪರೂಪದ ಪ್ರಸಂಗವೊಂದು ನಡೆದಿದೆ. ಚಿಕ್ಕಮಗಳೂರು ಘಟಕದ ಕೆಎಸ್​ಆರ್​​ಟಿಸಿ ಬಸ್​ನಲ್ಲಿ ಈ ಪ್ರಕರಣ ನಡೆದಿದೆ.
ಚಿಕ್ಕಮಗಳೂರು ವಿಭಾಗದ ಚಿಕ್ಕಮಗಳೂರು ಘಟಕದ ವಾಹನ ಸಂಖ್ಯೆ ಕೆಎ-13 ಎಫ್-0855ರಲ್ಲಿ ಬೆಂಗಳೂರು-ಚಿಕ್ಕಮಗಳೂರು ಮಾರ್ಗವಾಗಿ ನಿನ್ನೆ ತೆರಳುತ್ತಿದ್ದಾಗ ಉದಯಪುರ ಸಮೀಪದ ಕೃಷಿ ಕಾಲೇಜು ಹತ್ತಿರ ಮಧ್ಯಾಹ್ನ 1.25ರ ಸುಮಾರಿಗೆ ಈ ಘಟನೆ ನಡೆದಿತ್ತು. ಈ ಸಂದರ್ಭದಲ್ಲಿ ಬಸ್​ನಲ್ಲಿ 15 ಪ್ರಯಾಣಿಕರಿದ್ದರು. ಈ ಬಸ್​ನಲ್ಲಿ ಬೇಲೂರಿಗೆ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಹೆರಿಗೆ ನೋವು ಉಂಟಾಗಿದ್ದು, ಹತ್ತಿರ ಯಾವುದೂ ಆಸ್ಪತ್ರೆ ಇರಲಿಲ್ಲ. ಆಕೆಗೆ ತಕ್ಷಣದ ಸಹಾಯದ ಅಗತ್ಯವಿರುವುದನ್ನು ಮನಗಂಡ ಬಸ್​ ನಿರ್ವಾಹಕಿ ಹಾಗೂ ಚಾಲಕಿಯೂ ಆಗಿರುವ ಎನ್​. ವಸಂತಮ್ಮ ಕೂಡಲೇ ಬಸ್​ ನಿಲ್ಲಿಸಿದರು.
ಇದನ್ನೂ ಓದಿ:ಸ್ಮಶಾನದಲ್ಲಿ ಹುಡುಗಿಯರ ಫೋಟೋಗಳಿಗೆ ಮಾಟ-ಮಂತ್ರ; ಮಧ್ಯರಾತ್ರಿ ಬೆತ್ತಲೆಯಾಗಿ ವಾಮಾಚಾರ; ಮಹಿಳೆಯೂ ಭಾಗಿ!
ನಂತರ ವಾಹನದಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಬಸ್​ನಿಂದ ಕೆಳಕ್ಕಿಳಿಸಿ ಗರ್ಭಿಣಿಗೆ ಹೆರಿಗೆ ಮಾಡಿಸಿದ್ದಾರೆ. ಗರ್ಭಿಣಿ ಮಹಿಳೆ ಆರ್ಥಿಕವಾಗಿ ಸಬಲರಲ್ಲದ್ದರಿಂದ ಆಕೆಯ ತುರ್ತು ಖರ್ಚಿಗಾಗಿ ಪ್ರಯಾಣಿಕರಿಂದ ಒಟ್ಟು 1,500 ರೂ. ಸಂಗ್ರಹಿಸಿ ನೀಡಿರುತ್ತಾರೆ. ಬಳಿಕ ಆ್ಯಂಬುಲೆನ್ಸ್​ ಮೂಲಕ ಶಾಂತಿಗ್ರಾಮ ಆಸ್ಪತ್ರೆಗೆ ಕಳುಹಿಸಿ ದಾಖಲಿಸಿರುತ್ತಾರೆ.
ಇದನ್ನೂ ಓದಿ:ಲಿಂಗಾಯತರನ್ನು ಸಿಎಂ ಮಾಡಲಿ ನೋಡೋಣ: ಕಾಂಗ್ರೆಸ್​ಗೆ ಮಾಜಿ ಸಚಿವ ನಿರಾಣಿ ಸವಾಲು
ಮಹಿಳೆ ಮತ್ತು ಹೆಣ್ಣು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಸಕಾಲದಲ್ಲಿ ಸ್ಪಂದಿಸಿ ಮಗು ಮತ್ತು ತಾಯಿಯನ್ನು ಉಳಿಸಿ ಮಾನವೀಯತೆ ತೋರಿದ ನಿರ್ವಾಹಕಿಯ ಕಾರ್ಯ ಶ್ಲಾಘನೀಯ ಎಂದಿರುವ ಕೆಎಸ್​ಆರ್​​ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ.ಸತ್ಯವತಿ ಆಕೆಗೆ ಮೆಚ್ಚುಗೆ ಸೂಚಿಸಿದ್ದಾರೆ.
pic.twitter.com/XtuIgVJUCi
— KSRTC (@KSRTC_Journeys)May 15, 2023

ಚುನಾವಣಾ ಫಲಿತಾಂಶದ ವಿರುದ್ಧ ನ್ಯಾಯಾಲಯದ ಮೊರೆ ಹೋಗಲು ಕಾಂಗ್ರೆಸ್ ಅಭ್ಯರ್ಥಿ ನಿರ್ಧಾರ

ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಪರಾಜಿತ ಅಭ್ಯರ್ಥಿ ರಮಾನಾಥ ರೈ ಘೋಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
