ಬೆಂಗಳೂರು: ಕೋವಿಡ್-19 ಸೋಂಕು ತಡೆಯಲು ಮತ್ತಷ್ಟು ಮುಂಜಾಗ್ರತಾ ಕ್ರಮ ಕೈಗೊಂಡಿರುವ ಸರ್ಕಾರ, ಬಡವರ ಆಹಾರ ಮತ್ತು ಜನಸಾಮಾನ್ಯರ ಆರೋಗ್ಯ ದೃಷ್ಟಿಯಿಂದ ಎರಡು ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
ಇಂದಿರಾ ಕ್ಯಾಂಟೀನ್​ನಲ್ಲಿ ಉಚಿತ ಆಹಾರ ಒದಗಿಸಲಾಗುವುದು ಹಾಗೂ ಜ್ವರ ಬಂದವರ ಪರೀಕ್ಷೆಗೆ 30 ಫೀವರ್ ಟೆಸ್ಟ್ ಕೇಂದ್ರ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಘೋಷಿಸಿದರು.
ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಜೀವನೋಪಾಯಕ್ಕೆ ದೈನಂದಿನ ಆದಾಯದ ಮೇಲೆ ಅವಲಂಬಿತರಾಗಿರುವ ಜನರಿಗೆ ಇಂದಿರಾ ಕ್ಯಾಂಟೀನ್​ನಲ್ಲಿ ಉಚಿತ ಆಹಾರ ಒದಗಿಸಲಾಗುವುದು ಎಂದರು. ಬೆಂಗಳೂರು ಕರಗ ಉತ್ಸವ ನಡೆಸಲು ಅವಕಾಶ ಇಲ್ಲ. ದೇವಾಲಯ, ಪ್ರಾರ್ಥನಾಲಯಗಳಲ್ಲಿ ಗುಂಪು ಸೇರುವಂತಿಲ್ಲ. ಟೆಲಿಕನ್ಸಲ್ಟೇಶನ್​ಗೆ ಅವಕಾಶ ನೀಡಲಾಗುವುದು. ಚಿಕಿತ್ಸೆ, ಸಲಹೆಗೆ ಹೊರಬರುವ ಅಗತ್ಯ ಇಲ್ಲ ಎಂದರು.
ಕೋವಿಡ್-19 ತಡೆ ಗಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ ಕಾರ್ಯ ನಿರ್ವಹಿಸುವಂತೆ ಖಾಸಗಿ ಆಸ್ಪತ್ರೆಗಳು, ತಜ್ಞ ವೈದ್ಯರು ಹಾಗೂ ಪರಿಣತರಲ್ಲಿ ಮನವಿ ಮಾಡಿದ್ದೇನೆ. ಅವರ ಸಲಹೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ಫೀವರ್ ಕ್ಲಿನಿಕ್​ಗಳನ್ನು ಸ್ಥಾಪಿಸಿ, ಪ್ರಾಥಮಿಕ ಪರೀಕ್ಷೆ ನಡೆಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು, ಅದರಂತೆ 30 ಫೀವರ್ ಕ್ಲಿನಿಕ್ ಸ್ಥಾಪಿಸಲಾಗುವುದು ಎಂದು ಹೇಳಿದರು.
ಖಾಸಗಿ ಆಸ್ಪತ್ರೆಯವರು ಶೇ.50 ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯ ಸೇವೆ ಒದಗಿಸುವ ಭರವಸೆ ನೀಡಿದ್ದಾರೆ. ನೂರಕ್ಕೂ ಹೆಚ್ಚು ವೆಂಟಿಲೇಟರ್​ಗಳನ್ನು ಒದಗಿಸಲು ಮುಂದೆ ಬಂದಿದ್ದಾರೆ ಎಂದು ವಿವರಿಸಿದರು. ಸಾರಿಗೆ ಮತ್ತು ಗೃಹ ಇಲಾಖೆಯ ಸಭೆ ನಡೆಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆ ನೀಡಲಾಗಿದೆ. ಹೋಮ್ ಕ್ವಾರಂಟೈನ್ ಕಟ್ಟುನಿಟ್ಟಾಗಿ ಜಾರಿಗೊಳಿಸಲು ತೀರ್ವನಿಸಲಾಯಿತು ಎಂದರು.
ಡಿಸಿಎಂ ಡಾ.ಅಶ್ವತ್ಥನಾರಾಯಣ, ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಿಎಸ್ ಟಿ.ಎಂ.ವಿಜಯಭಾಸ್ಕರ್, ವಿವಿಧ ಆಸ್ಪತ್ರೆಗಳ ಮುಖ್ಯಸ್ಥರಾದ ಡಾ. ನರೇನ್​ಶೆಟ್ಟಿ, ಡಾ. ಸುದರ್ಶನ್ ಬಲ್ಲಾಳ್, ಡಾ. ದೇವಿ ಶೆಟ್ಟಿ, ಡಾ. ಮನೀಷ್ ಮಟ್ಟು, ಡಾ. ವಿಶಾಲ್ ರಾವ್ ಇತರರಿದ್ದರು.
ಕ್ಯೂ ನಿಂತು ಪರೀಕ್ಷಿಸಿಕೊಂಡ ಸಚಿವರು
ಕರೊನಾ ಭೀತಿ ಹಿನ್ನೆಲೆಯಲ್ಲಿ ಸಚಿವರೆಲ್ಲ ಸರತಿಯಲ್ಲಿ ನಿಂತು ಥರ್ಮಲ್ ಸ್ಕಾ್ಯನಿಂಗ್ ಮೂಲಕ ಪರೀಕ್ಷೆಗೆ ಒಳಗಾದರು. ವಿಧಾನಸೌಧ ಪ್ರವೇಶ ಮಾಡುವ ಕಡೆಯೆಲ್ಲ ಆರೋಗ್ಯ ಇಲಾಖೆ ಸಿಬ್ಬಂದಿ ಥರ್ಮಲ್ ಸ್ಕಾ್ಯನರ್ ಮೂಲಕ ಉಷ್ಣಾಂಶ ಪರೀಕ್ಷೆ ಮಾಡುತ್ತಿದ್ದರು. ಸಚಿವರಾದ ಬಸವರಾಜ ಬೊಮ್ಮಾಯಿ, ಶಶಿಕಲಾ ಜೊಲ್ಲೆ, ಶಾಸಕರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಸರತಿ ನಿಂತು ಪರೀಕ್ಷಿಸಿಕೊಂಡರು. ಪೊಲೀಸ್ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿ ಪ್ರತಿಯೊಬ್ಬರಿಗೂ ಸ್ಯಾನಿಟೈಸರ್ ನೀಡುತ್ತಿದ್ದರು.
ಹಳ್ಳಿಗಳಿಗೆ ಹೋಗಬೇಡಿ
ಸರ್ಕಾರ ಕೋವಿಡ್-19 ತಡೆಯುವುದರೊಂದಿಗೆ ಸೋಂಕಿತರ ಚಿಕಿತ್ಸೆಗೂ ಪೂರ್ವಸಿದ್ಧತೆ ನಡೆಸುತ್ತಿದೆ. ಜನರು ಪರಿಸ್ಥಿತಿಯ ಗಂಭೀರತೆ ಅರಿತು ಮನೆಯಲ್ಲೇ ಇರಬೇಕು. ಸೋಂಕು ಮುಕ್ತರಾಗಿರಿ ಎಂಬ ಘೊಷವಾಕ್ಯ ಪಾಲಿಸಬೇಕು. ನಗರ ಪ್ರದೇಶದಲ್ಲಿ ವಾಸವಾಗಿರುವ ಜನರು ಕೋವಿಡ್ ಸೋಂಕುಮುಕ್ತವಾಗಿರುವ ಹಳ್ಳಿಗಳಿಗೆ ತೆರಳಬೇಡಿ ಎಂದು ಯಡಿಯೂರಪ್ಪ ಮನವಿ ಮಾಡಿದರು.
ಲಾಕ್​ಡೌನ್​ಗೆ ಒತ್ತಾಯ
ಕರೊನಾ ಸೋಂಕಿತರ ಸಂಪರ್ಕಕ್ಕೆ ಬಂದ ದೊಡ್ಡ ಸಂಖ್ಯೆಯ ಜನರನ್ನು ಕ್ವಾರಂಟೈನ್​ನಲ್ಲಿ ಇಡುವುದೇ ದೊಡ್ಡ ಸವಾಲಾಗಿದೆ. ಇದಕ್ಕೆ ಸಂಪೂರ್ಣ ಲಾಕ್​ಡೌನ್ ಮಾಡುವುದೇ ಪರಿಹಾರ ಎಂದು ವೈದ್ಯ ಸಮೂಹ ಸಲಹೆ ನೀಡಿತು. ಕೋವಿಡ್ 19 ಅನ್ನು ತಡೆಯಲು ಸರ್ಕಾರ-ಖಾಸಗಿ ಸಹಭಾಗಿತ್ವ ಬಲಪಡಿಸಲು ಸಭೆಯಲ್ಲಿ ತೀರ್ವನಿಸಲಾಯಿತು.
ಕೈದಿಗಳಿಂದ ಮಾಸ್ಕ್ ತಯಾರಿ
ಜೈಲಿನಲ್ಲಿರುವ ಕೈದಿಗಳು ಅತಿ ಕಡಿಮೆ ವೆಚ್ಚದಲ್ಲಿ ಮಾಸ್ಕ್ ಸಿದ್ಧಪಡಿಸುತ್ತಿದ್ದು, ಈವರೆಗೆ 17 ಸಾವಿರ ಮಾಸ್ಕ್ ತಯಾರಿಸಿ ಸರ್ಕಾರಕ್ಕೆ ಒಪ್ಪಿಸಿದ್ದಾರೆ. ಈ ಮಾಸ್ಕ್​ಗಳನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಬಂಧಿಖಾನೆ ಡಿಜಿಪಿ ಅಲೋಕ್ ಮೋಹನ್ ಸೋಮವಾರ ಹಸ್ತಾಂತರಿಸಿದರು.
ಪೊಲೀಸರಿಗಾಗಿ ತಲಾ 6 ರೂ.ನಂತೆ ಪ್ರತಿದಿನ 3 ಪದರದ 5 ಸಾವಿರ ಮಾಸ್ಕ್​ಗಳನ್ನು ತಯಾರಿಸುತ್ತಿದ್ದು, ಇನ್ನೊಂದು ವಾರದಲ್ಲಿ ಇಲಾಖೆ ಬೇಡಿಕೆ ಪೂರೈಸುತ್ತಾರೆ. ನಂತರ ಇತರರ ಬಳಕೆಗೆ ಅವಕಾಶವಾಗಲಿದೆ.
ಬಸವರಾಜ ಬೊಮ್ಮಾಯಿ ಮಾತನಾಡಿ, ಇಲಾಖೆಯಲ್ಲಿನ ಸಿಬ್ಬಂದಿ ಕರೊನಾ ಸೋಂಕಿತರು ಹಾಗೂ ಶಂಕಿತರ ರಕ್ಷಣೆಯನ್ನೂ ಮಾಡುತ್ತಿದ್ದಾರೆ. ಅವರ ಮೇಲೆ ನಿಗಾ ಇಡುವುದು ಸೇರಿ ಹಲವು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಅಲ್ಲದೆ, ಸಾರ್ವಜನಿಕ ಸಂಪರ್ಕದಲ್ಲಿರಬೇಕಾದ ಅನಿವಾರ್ಯತೆಯೂ ಇದೆ. ಹೀಗಾಗಿ ಅವರಿಗೆ ಮಾಸ್ಕ್ ಕೂಡ ಅಷ್ಟೇ ಅನಿವಾರ್ಯವಾಗಿದೆ ಎಂದರು. ಕಾರಾಗೃಹಗಳಿಗೆ ಹೊಸದಾಗಿ ಬರುತ್ತಿರುವ ಕೈದಿಗಳನ್ನು ಕಡ್ಡಾಯವಾಗಿ ಥರ್ಮಲ್ ಪರೀಕ್ಷೆಗೊಳಪಡಿಸಿ, 14 ದಿನಗಳ ಕಾಲ ಪ್ರತ್ಯೇಕ ನಿಗಾದಲ್ಲಿ ಇಡಲಾಗುತ್ತಿದೆ. ಅಲ್ಲದೆ, ಈಗಾಗಲೆ ಜೈಲಿನಲ್ಲಿರುವ ಕೈದಿಗಳ ಆರೋಗ್ಯದ ಮೇಲೂ ವೈದ್ಯರು ನಿಗಾ ಇಟ್ಟಿದ್ದಾರೆ. ತಮ್ಮನ್ನು ಸಂದರ್ಶನ ಅಥವಾ ಭೇಟಿ ಮಾಡಲು ಬಾರದಂತೆ ಸ್ವತಃ ಕೈದಿಗಳೇ ಕುಟುಂಬಸ್ಥರಿಗೆ ಮನವಿ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಸಂಪೂರ್ಣ ಲಾಕ್​ಡೌನ್ ರಾಜ್ಯಕ್ಕೆ ವಿಸ್ತರಿಸಿದ ಮುಖ್ಯಮಂತ್ರಿ ಬಿಎಸ್​ವೈ: Covid19 ಸೋಂಕು ತಡೆಗೆ ಕಠಿಣ ಕ್ರಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − fourteen =
Remember me
