ಧಾರವಾಡ:ಯುವತಿಯರಿಬ್ಬರ ಮಧ್ಯೆ ಬೀದಿ ರಂಪಾಟ ನಡೆದ ಘಟನೆ ಧಾರವಾಡದ ಓಲ್ಡ್​ ಡಿಎಸ್ಪಿ ಸರ್ಕಲ್ ಬಳಿ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಯುವತಿಯರಿಬ್ಬರು ಒಂದೇ ಕಾರಿನಲ್ಲಿ ಜೊತೆಯಾಗಿ ಬಂದಿದ್ದರು. ಮೊದಲು ಕಾರಿನಲ್ಲಿ ಇಬ್ಬರ ಮಧ್ಯೆ ಜಗಳ ಆರಂಭವಾಗಿದೆ. ಬಳಿಕ ರಸ್ತೆ ಪಕ್ಕದಲ್ಲಿ ಕಾರು ನಿಲ್ಲಿಸಿ ಕಾರಿನ ಒಳಗೆ ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಇದಾದ ನಂತರ ಕಾರಿನಿಂದ ಕೆಳಗೆ ಇಳಿದು ಬಡಿದಾಡಿದ್ದಾರೆ. ಪರಸ್ಪರ ಕೂದಲನ್ನು ಹಿಡಿದು ಎಳೆದಾಡಿದ್ದಾರೆ. ಅಲ್ಲದೆ, ಇಬ್ಬರು ಕೆಟ್ಟ ಪದಗಳಿಂದ ನಿಂದಿಸಿಕೊಂಡಿದ್ದಾರೆ.
ಇದನ್ನೂ ಓದಿ:ಕಬಡ್ಡಿ ಆಡುವಾಗ ಹೃದಯಾಘಾತ: ಸ್ನೇಹಿತರ ಎದುರಲ್ಲೇ ಕುಸಿದು ಬಿದ್ದು ದುರಂತ ಅಂತ್ಯ ಕಂಡ ಯುವಕ!
ಯುವತಿಯರ ಹೊಡೆದಾಟವನ್ನು ಅದೇ ರಸ್ತೆಯಲ್ಲಿ ಹೋಗುತ್ತಿದ್ದವರು ಮೊಬೈಲ್‌ನಲ್ಲಿ ರೆಕಾರ್ಡ್​ ಮಾಡಿದ್ದಾರೆ. ಸ್ಥಳೀಯರು ಮಧ್ಯ ಪ್ರವೇಶಿಸಿ ಇಬ್ಬರ ಜಗಳವನ್ನು ಬಿಡಿಸಿದ್ದಾರೆ. ಓರ್ವ ಯುವತಿ ಕಾರನ್ನು ಬಿಟ್ಟು ಅಲ್ಲಿಂದ ಹೊರಟು ಹೋದಳು. ಇನ್ನೊರ್ವ ಯುವತಿ ಕಾರು ತೆಗೆದುಕೊಂಡು ಅಲ್ಲಿಂದ ಹೊರಟಳು.
ಯಾವ ಕಾರಣಕ್ಕೆ ಇಬ್ಬರು ಹೊಡೆದಾಡಿಕೊಂಡಿದ್ದಾರೆ ಎಂಬುದು ತಿಳಿದುಬಂದಿಲ್ಲ. ಆದರೆ, ವಿಡಿಯೋ ಮಾತ್ರ ಜಾಲತಾಣದಲ್ಲಿ ವೈರಲ್​ ಆಗಿದೆ.(ದಿಗ್ವಿಜಯ ನ್ಯೂಸ್​)
ಪತಿ ದುಬೈನಲ್ಲಿದ್ದಾನೆ ಮನೆಗೆ ಬಾ… ಮಹಿಳೆಯ ಮಾತು ನಂಬಿ ಹೋದ ಯುವಕನಿಗೆ ಕಾದಿತ್ತು ಬಿಗ್​ ಶಾಕ್​

ದಕ್ಷಿಣ ಭಾರತ ಸಿನಿಮಾರಂಗದಿಂದ ಗೋವಾ ಬ್ಯೂಟಿ ಇಲಿಯಾನಾ ಡಿ ಕ್ರೂಸ್ ಬ್ಯಾನ್​! ಕಾರಣ ಹೀಗಿದೆ….

ತಂದೆಯಿಂದಲೇ ಲೈಂಗಿಕ ದೌರ್ಜನ್ಯ: ಬಾಲ್ಯದ ಕಹಿ ಘಟನೆಯನ್ನು ಬಿಚ್ಚಿಟ್ಟ ಖುಷ್ಬೂ ಸುಂದರ್

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:three × five =
Remember me
