ಜಗಳೂರು:ಅಡಕೆ ಗಿಡಕ್ಕೆ ಹರಿಸಿದ ನೀರು ರಸ್ತೆಗೆ ಬಂದ ಹಿನ್ನೆಲೆಯಲ್ಲಿ ತಾಲೂಕಿನ ಮಿನಿಗರಹಳ್ಳಿಯಲ್ಲಿ ಎರಡು ಗುಂಪುಗಳ ನಡುವೆ ಶನಿವಾರ ನಡೆದ ಮಾರಾಮಾರಿಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಗಳೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಕಾರಣ ಗ್ರಾಮದಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ.
ಗ್ರಾಮದ ಹಾಲಮ್ಮ ಎಂಬುವರು ತಮ್ಮ ಮನೆ ಮುಂಭಾಗ ಬೆಳೆಸಿದ್ದ ಅಡಕೆ ಸಸಿಗೆ ಮನೆಯ ನೀರು ಹರಿದು ಹೋಗುವಂತೆ ಮಾಡಿದ್ದರು. ಈ ನೀರು ರಸ್ತೆಗೆ ಹರಿದು ಬಂದಿದ್ದಕ್ಕೆ ಕಬ್ಬಳ್ಳಿ ಬಸವರಾಜಪ್ಪ ಎಂಬುವರು ಆಕ್ಷೇಪಿಸಿದ್ದರು. ಇದೇ ವಿಚಾರವಾಗಿ ಮಾತಿನ ಚಕಮಕಿ ನಡೆದು, ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆಯಿತು.
ಎರಡೂ ಕಡೆಯವರು ಕಲ್ಲು-ಬಡಿಗೆ, ಕಣಗ ತೆಗೆದುಕೊಂಡು ಹೊಡೆದಾಡಿದರು. ಗಾಯಗೊಂಡ ಹಾಲಮ್ಮ, ರಮೇಶ್, ನಾಗರಾಜ್, ಶೇಖರಪ್ಪ, ಮಲ್ಲೇಶ್, ಬಸವರಾಜ್, ಗಿರಿಜಮ್ಮ, ಕಲ್ಲೇಶ್, ಶಿವಮ್ಮ ಇವರನ್ನು ಜಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯದಲ್ಲಿ ಇನ್ನೂ ಎರಡು ವಾರ ನೈಟ್​ ಕರ್ಫ್ಯೂ; ಕರೊನಾ ಆತಂಕ ಹೆಚ್ಚಳ, ಮತ್ತಷ್ಟು ಕಟ್ಟುನಿಟ್ಟು…

‘ತಂದೆಗೆ ಒಳ್ಳೆಯ ಮಗಳಾಗಲಿಲ್ಲ, ಗಂಡನಿಗೆ ತಕ್ಕ ಹೆಂಡತಿಯಾಗಲಿಲ್ಲ..’: ಮೋಹನಕುಮಾರಿ ಇನ್ನಿಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 10 =
Remember me
