ವಿಜಯನಗರ:ಜೂಜಾಟದ ವೇಳೆ ಉಂಟಾದ ಜಗಳ ವಿಕೋಪಕ್ಕೆ ತೆರಳಿ ಎರಡು ಗುಂಪುಗಳ ನಡುವೆ ಮಾರಾಮಾರಿ ಸಂಭವಿಸಿದ್ದು, ಕೊನೆಗೆ ಸ್ವಾಮೀಜಿಯೊಬ್ಬರ ಮಧ್ಯಪ್ರವೇಶದಿಂದ ಸಂಧಾನ ನಡೆದಿದೆ. ವಿಜಯನಗರ ಜಿಲ್ಲೆ ಹರಪ್ಪನಹಳ್ಳಿ ತಾಲೂಕಿನ ಅಡವಿಹಳ್ಳಿ ಗ್ರಾಮದಲ್ಲಿ ಈ ಘಟನೆ ಜರುಗಿದೆ.
ನಾಗರ ಪಂಚಮಿ ಹಬ್ಬದ ಸಂದರ್ಭ ನಡೆದ ಜೂಜಾಟದ ವೇಳೆ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದೆ. ಈ ಸಂದರ್ಭದಲ್ಲಿ ಎರಡೂ ಗುಂಪಿನವರು ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡಿದ್ದರಿಂದ ಪರಿಸ್ಥಿತಿ ವಿಕೋಪಕ್ಕೆ ತೆರಳಿತ್ತು.
ಆಗ ಉದ್ರಿಕ್ತಗೊಂಡ ಎರಡೂ ಗುಂಪಿನ ಸದಸ್ಯರ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ-ಕಲ್ಲುಗಳಿಂದ ಹೊಡೆದಾಡಿಕೊಂಡ ಇವರು ಮಹಿಳೆಯರು ಎಂಬುವುದನ್ನೂ ಲೆಕ್ಕಿಸದೆ ಬಡಿದಾಡಿಕೊಂಡಿದ್ದಾರೆ.
ಇದನ್ನೂ ಓದಿ:ನಾನು ಆರ್​ಎಸ್​ಎಸ್​ ಸ್ವಯಂಸೇವಕ, ಕೊತ್ವಾಲ್ ರಾಮಚಂದ್ರನ ಶಿಷ್ಯ ಅಲ್ಲ: ಸಿ.ಟಿ. ರವಿ
ಸ್ಥಳಕ್ಕೆ ಹರಪ್ಪನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ನಂತರ ಸ್ಥಳೀಯ ಸ್ವಾಮೀಜಿಯೊಬ್ಬರು ಸಂಧಾನ ನಡೆಸಿದರು. ಎರಡೂ ಗುಂಪಿನ ಮುಖಂಡರ ಜತೆ ಮಾತನಾಡಿದ ಸ್ವಾಮೀಜಿ, ಎರಡೂ ಕಡೆಯವರನ್ನು ರಾಜಿ ಮಾಡಿಸಿದರು.
ಪ್ಲಾಸ್ಟಿಕ್​ ಕಪ್​, ಪ್ಲೇಟ್​, ಸ್ಟ್ರಾಗಳ ಉತ್ಪಾದನೆಯೇ ಬಂದ್​; ಸರ್ಕಾರದಿಂದ ಘೋಷಣೆ

ಪ್ರಾಂಶುಪಾಲರ ಉಪಟಳ ಸಹಿಸಲಾಗುತ್ತಿಲ್ಲ ಎಂದು ಶಾಸಕರ ಕಾಲಿಗೆ ಬಿದ್ದ ಉಪನ್ಯಾಸಕ!

ಮತ್ತೆ ಎದುರಾಯ್ತು ಹಬ್ಬಗಳಿಗೂ ನಿರ್ಬಂಧ; ಮನೆ-ದೇವಸ್ಥಾನಗಳ ಒಳಗಷ್ಟೇ ಹಬ್ಬ ಆಚರಿಸಿ ಎಂದು ಆದೇಶಿಸಿದ ಸರ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + three =
Remember me
