ಮೈಸೂರು:ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆಗೆ ರಾಜ್ಯದ್ಯಂತ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್​ ದೊರೆತ್ತಿದ್ದು, ಬಸ್​ನಲ್ಲಿ ಪ್ರಯಾಣಿಸಲು ನೂಕುನುಗ್ಗಲು ಉಂಟಾಗುತ್ತಿದೆ.
ಕೆಲವೆಡೆ ಮಹಿಳೆಯರು ಬಸ್​ ಹತ್ತುವಾಗ ಡೋರ್​, ಕಿಟಕಿಯ ಸರಳುಗಳು ಕಿತ್ತುಕೊಂಡು ಬಂದಿರುವ ಫೋಟೋ ಹಾಗು ವಿಡಿಯೋವನ್ನು ನಾವು ನೋಡಿದ್ದೇವೆ. ಇದೀಗ ಕಳಿತುಕೊಳ್ಳುವ ವಿಚಾರವಾಗಿ ಮಹಿಳೆಯರಿಬ್ಬರು ನಡುವೆ ಹೊಡೆದಾಟವಾಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಘಟನೆಯೂ ಮೈಸೂರು ಸಿಟಿ ಬಸ್​ ನಿಲ್ದಾಣದಲ್ಲಿ ನಡೆದಿದೆ.
ಇದನ್ನೂ ಓದಿ:VIDEO| ವಿಶ್ವಕಪ್​ ಆಡದಿದ್ದರೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದ ಪಾಕಿಸ್ತಾನದ​ ಮಾಜಿ ಬ್ಯಾಟ್ಸ್​ಮ್ಯಾನ್​
ಆಷಾಢ ಮಂಗಳವಾರ ಪ್ರಯುಕ್ತ ಚಾಮುಂಡಿ ಬೆಟ್ಟಕ್ಕೆ ತೆರಳಲೆಂದು ಮಹಿಳೆಯೊಬ್ಬರು ಕಿಟಕಿ ಮೂಲಕ ಸೀಟಿಗೆ ಕರವಸ್ತ್ರ ಹಾಕಿ ಕಾಯ್ದಿಸಿದ್ದಾರೆ. ಇದನ್ನು ಗಮನಿಸಿದ ಮತ್ತೋರ್ವ ಮಹಿಳೆ ಸೀಟಿನ ಮೇಲೆ ಹಾಕಲಾಗಿದ್ದ ಕರ್ಚೀಫ್​ ಅನ್ನು ತೆಗೆದು ಬಿಸಾಡಿದ್ಧಾರೆ.
ಇದನ್ನು ಗಮನಿಸಿದ ಮಹಿಳೆ ಈ ವಿಚಾರ ಇಬ್ಬರ ನಡುವಿನ ಗದ್ದಲಕ್ಕೆ ಕಾರಣವಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಇಬ್ಬರು ನೀರೆಯರು ಹೊಡೆದಾಡಿಕೊಂಡಿದ್ಧಾರೆ. ಇನ್ನು ಘಟನೆಯ ವಿಡಿಯೋ ವೈರಲ್​ ಆಗಿದ್ದು, ನಿಜವಾದ ನಾರಿ ಶಕ್ತಿ ಅನಾವರಣ ಆಯಿತು ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 16 =
Remember me
