ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಇದು ತಮ್ಮ ಹೋರಾಟದ ಲ ಎಂದು ಬಿಜೆಪಿ ಮತ್ತು ಜೆಡಿಎಸ್ ಕ್ಲೇಮ್ ಮಾಡುತ್ತಿವೆ.
ಈ ಹೋರಾಟದ ಯಶಸ್ಸಿನ ಸಂಭ್ರಮದಲ್ಲೇ ಸಿಎಂ ರಾಜೀನಾಮೆಗೆ ಆಗ್ರಹಿಸಿ ಮತ್ತೊಂದು ಸುತ್ತಿನ ಪ್ರತಿಭಟನೆ ನಡೆಸಲು ಜೆಡಿಎಸ್ ಆಲೋಚನೆ ನಡೆಸಿದೆ.
ಸಿಎಂ ರಾಜೀನಾಮೆ ಕೊಡುವವರೆಗೂ ಹೋರಾಟ ಮುಂದುವರಿಸಬೇಕು ಎಂಬುದು ಜೆಡಿಎಸ್ ನಿಲುವು. ಇಷ್ಟಕ್ಕೇ ಹೋರಾಟ ನಿಲ್ಲಿಸಿದರೆ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಂತಾಗುವುದಿಲ್ಲ. ಹಾಗಾಗಿ ವಿಭಿನ್ನ ಸ್ತರದಲ್ಲಿ, ವಿಭಿನ್ನ ರೀತಿಯಲ್ಲಿ ಹೋರಾಟ ಮುಂದುವರಿಸಬೇಕಿದೆ ಎಂಬುದು ಜೆಡಿಎಸ್ ನಾಯಕರ ಅಭಿಪ್ರಾಯವಾಗಿದೆ.
ಈ ಪ್ರಕರಣದಲ್ಲಿ ತಮ್ಮದೇನೂ ತಪ್ಪಿಲ್ಲ. ಇದು ರಾಜಕೀಯ ದ್ವೇಷ. ನಾನು ರಾಜೀನಾಮೆ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿರುವುದರಿಂದ ಜೆಡಿಎಸ್ ಕೆಂಡಾಮಂಡಲವಾಗಿದೆ. ಸಿದ್ದರಾಮಯ್ಯ ಅವರನ್ನು ಕುರ್ಚಿಯಿಂದ ಕೆಳಗಿಳಿಸುವವರೆಗೂ ನಮ್ಮ ಹೋರಾಟ ನಿರಂತರವಾಗಿರಲಿದೆ ಎಂದು ನಿಖಿಲ್ ಕುಮಾರಸ್ವಾಮಿ ಸುಳಿವು ನೀಡಿದ್ದಾರೆ.
ಭಾನುವಾರ ಜೆಡಿಎಸ್ ಶಾಸಕರು, ಮಾಜಿ ಶಾಸಕರು, ಸಂಸದರು, ಮಾಜಿ ಸಂಸದರು ಹಾಗೂ ಮುಖಂಡರ ಸಭೆ ಕರೆದಿದ್ದು, ಈ ಸಭೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಹೋರಾಟ ಮುಂದುವರಿಸುವ ವಿಷಯವೂ ಚರ್ಚೆಗೆ ಬರಲಿದೆ ಎನ್ನಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಈ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಪಕ್ಷದ ಮುಖಂಡರು, ಕಾಯಕರ್ತರ ಅಭಿಪ್ರಾಯ ಪಡೆದು ಹೋರಾಟ ಮುಂದುವರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
