ಮಂಡ್ಯ:ಟಿಕೆಟ್​ ಸಿಗದ ಹಿನ್ನೆಲೆಯಲ್ಲಿ ಒಬ್ಬೊಬ್ಬರಾಗಿ ಪಕ್ಷ ಬಿಡುತ್ತಿದ್ದು, ಇದೀಗ ಬಿಜೆಪಿಯ ಇನ್ನೊಬ್ಬರು ಪಕ್ಷಕ್ಕೆ ವಿದಾಯ ಹೇಳಿದ್ದಾರೆ. ಟಿಕೆಟ್​ವಂಚಿತರಾಗಿದ್ದಕ್ಕೆ ಬೇಸರಗೊಂಡಿರುವ ಬಿ.ಎಂ.ಮಲ್ಲಿಕಾರ್ಜುನ ಅಲಿಯಾಸ್​ ಫೈಟರ್​ ರವಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ನಾಗಮಂಗಲ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಫೈಟರ್ ರವಿ, ಟಿಕೆಟ್ ಸಿಗುತ್ತದೆ ಎಂಬ ಆಸೆಯಿಂದಲೇ ಇತ್ತೀಚೆಗೆ ಬಿಜೆಪಿಗೆ ಸೇರಿದ್ದರು. ಆದರೆ ತಮ್ಮ ನಿರೀಕ್ಷೆ ಹುಸಿಯಾದ್ದರಿಂದ ತೀವ್ರ ಬೇಸರಗೊಂಡಿರುವ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಇದನ್ನೂ ಓದಿ:ಹವಾಮಾನ ಮುನ್ಸೂಚನೆ: ಮುಂದಿನ 5 ದಿನ ರಾಜ್ಯದ ಎಲ್ಲೆಲ್ಲಿ ಮಳೆಯಾಗಲಿದೆ?
ನಾಗಮಂಗಲ ವಿಧಾನಸಭಾ ಕ್ಷೇತ್ರದ ಟಿಕೆಟ್​ ಸುಧಾ ಶಿವರಾಮೇಗೌಡರಿಗೆ ಸಿಕ್ಕಿದೆ. ಹೀಗಾಗಿ ಮನನೊಂದ ಫೈಟರ್ ರವಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ. ಇತ್ತೀಚೆಗೆ ಬೆಂಗಳೂರು-ಮೈಸೂರು ದಶಪಥ ಉದ್ಘಾಟನೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಫೈಟರ್​ ರವಿ ಸ್ವಾಗತಿಸಿದ್ದು ವಿವಾದಕ್ಕೀಡಾಗಿತ್ತು. ಈ ಸಂದರ್ಭದ ಫೋಟೋ ವೈರಲ್​ ಆಗಿ ಟ್ರೋಲ್​ಗೂ ಒಳಗಾಗಿತ್ತು.
ಸಿದ್ದರಾಮಯ್ಯಗೆ ವಾಯುಯಾನ ಕಂಟಕ?; ನಿನ್ನೆ ವಿಮಾನ, ಇಂದು ಹೆಲಿಕಾಪ್ಟರ್​ ಪ್ರಯಾಣದಲ್ಲಿ ಸಮಸ್ಯೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
