ಹಾಸನ:ಕರೊನಾ ವೈರಸ್​ ವ್ಯಾಪಕವಾಗಿ ಹರಡುತ್ತಿರುವುದರಿಂದ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಸರ್ಕಾರ, ವೈದ್ಯರು, ತಜ್ಞರು ಸಾರಿ ಸಾರಿ ಹೇಳುತ್ತಿದ್ದಾರೆ. ಆದರೆ ಇಲ್ಲೊಂದು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಈ ನಿಯಮವನ್ನು ಉಲ್ಲಂಘನೆ ಮಾಡಲಾಗಿದೆ..ಅದೂ ಕೂಡ ಪರಸ್ಪರ ಗುಂಪಾಗಿ ಬಡಿದಾಡಿಕೊಳ್ಳುವ ಮೂಲಕ !ಚೆನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮ ಪಂಚಾಯಿತಿಯಲ್ಲಿ ಈ ಘಟನೆ ನಡೆದಿದೆ. ಸಭೆಯಲ್ಲಿ ಭಾಗವಹಿಸಿದ್ದ ಅಧ್ಯಕ್ಷರು, ಪಿಡಿಒ ಮತ್ತು ಸ್ಥಳೀಯರ ಮಧ್ಯೆ ಹೊಡೆದಾಟ ನಡೆದಿದೆ.
ಕೆಂಬಾಳು ಗ್ರಾಮದಲ್ಲಿರುವ ಅಂಗಡಿಗಳಿಗೆ ಶುಲ್ಕ ವಿಧಿಸುವ ಸಂಬಂಧ ಚರ್ಚೆ ಮಾಡಲು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸಭೆ ಕರೆಯಲಾಗಿತ್ತು. ಅಧ್ಯಕ್ಷ ಮಂಜುನಾಥ್​ ನೇತೃತ್ವ ವಹಿಸಿದ್ದರು. ಆದರೆ ಈ ಸಭೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ ಹೆಸರಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಗ್ರಾಪಂ ಅಧ್ಯಕ್ಷ, ಪಿಡಿಒ ವಿರುದ್ಧ ಹರಿಹಾಯ್ದರು.
ಇದನ್ನೂ ಓದಿ:ವಿದ್ಯಾರ್ಥಿಗಳಿಗೆ ಪಠ್ಯ ಪುನರ್ಮನನಕ್ಕೆ ಫೋನ್‌ಔಟ್ ಕಾರ್ಯಕ್ರಮ
ಕಾಮಗಾರಿಯಲ್ಲಿ ಅವ್ಯವಹಾರ ಮಾಡಿದ್ದು ಸಾಲದೆಂದು ಈಗ ಅಂಗಡಿಗಳಿಂದಲೂ ಹಣ ವಸೂಲಿ ಮಾಡಲು ನಿರ್ಧರಿಸಿದ್ದೀರಾ ಎಂದು ವಾಗ್ದಾಳಿ ನಡೆಸಿದರು. ಈ ವೇಳೆ ಮಾತಿಗೆ ಮಾತು ಬೆಳೆದು ಹೊಡೆದಾಟವೇ ಶುರುವಾಯಿತು. ಸ್ಥಳೀಯರೆಲ್ಲ ಸೇರಿ ಗ್ರಾಪಂ ಅಧ್ಯಕ್ಷ, ಪಿಡಿಒ ಮೇಲೆ ಹಲ್ಲೆ ಮಾಡಲು ಪ್ರಾರಂಭ ಮಾಡಿದರು.ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ನಿಯಂತ್ರಣ ಮಾಡಿದ್ದಾರೆ. ಕಾರೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ನಾಳೆ ರಾಜ್ಯಾದ್ಯಂತ ಬಸ್ ಸಂಚಾರ ಆರಂಭ ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
