ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರವನ್ನು ಸಂಪೂರ್ಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಉಪ ವಿಭಾಗಾಧಿಕಾರಿ, ತಹಸೀಲ್ದಾರ್ ಮತ್ತಿತರ ಅಧಿಕಾರಿಗಳ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಸರ್ಕಾರಿ ಜಮೀನನ್ನು ಅಕ್ರಮವಾಗಿ ಖಾಸಗಿಯವರಿಗೆ ಪರಭಾರೆ ಮಾಡಿದ್ದ ತಹಸೀಲ್ದಾರ್ ಜೆ. ಉಮೇಶ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಅಲ್ಲದೆ, ಅವರು ಅಧಿಕಾರದಲ್ಲಿದ್ದ ಸಮಯದಲ್ಲಿ ಕಡೂರು ತಾಲೂಕಿನಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಗೂ 13 ಜನ ತಹಸೀಲ್ದಾರರನ್ನು ಒಳಗೊಂಡ ಪ್ರತ್ಯೇಕ ತಂಡವನ್ನು ರಚಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ.ಐದಾರು ವರ್ಷಗಳಿಂದ ಲೋಕಾಯುಕ್ತ ಸೇರಿದಂತೆ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿ ತನಿಖೆಯ ಹಂತದಲ್ಲಿದ್ದ 225 ನೌಕರ/ಅಧಿಕಾರಿಗಳ ಕಡತಗಳನ್ನು ಈಗಾಗಲೇ ಶೀಘ್ರ ವಿಚಾರಣೆ ನಡೆಸಿ ಶಿಕ್ಷೆಯ ಪ್ರಮಾಣವನ್ನು ದೃಢಪಡಿಸಲಾಗಿದೆ ಎಂದು ಹೇಳಿದ್ದಾರೆ.
ಯಲಹಂಕ ಉಪವಿಭಾಗಾಧಿಕಾರಿ ಎಂ.ಜಿ. ಶಿವಣ್ಣ ಎಂಬವರನ್ನು ಫೆ.2,2023ರಂದು ವರ್ಗಾವಣೆ ಮಾಡಲಾಗಿತ್ತು. ಆದರೆ ವರ್ಗಾವಣೆಗೊಂಡ ನಂತರವೂ ಅವರು ಯಲಹಂಕ ತಾಲೂಕು ಬಾಗಲೂರು ಗ್ರಾಮದ ಸರ್ವೆ ನಂ.191/1 ಮತ್ತು ಇತರೆ ಜಮೀನುಗಳಿಗೆ ಭೂಮಿ ತಂತ್ರಾಂಶದಲ್ಲಿ ಅನುಮೋದನೆಯನ್ನು ನೀಡಿರುತ್ತಾರೆ. ಇದು ಕ್ರಿಮಿನಲ್ ಸ್ವರೂಪದ ಅಪರಾಧವಾಗಿರುವುದರಿಂದ ಇಲಾಖೆಯ ಗಮನಕ್ಕೆ ಬರುತ್ತಿದ್ದಂತೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಇದೇ ಅಧಿಕಾರಿ ವಿರುದ್ಧ ಇನ್ನೂ ಅನೇಕ ಅಕ್ರಮಗಳು ಬೆಳಕಿಗೆ ಬಂದಿವೆ ಎಂದು ತಿಳಿಸಿದ್ದಾರೆ.
ಗೋಮಾಳ ಜಮೀನು ಕಬಳಿಸಿದ ಮಹಿಳೆಯೊಬ್ಬರಿಗೆ ಒಂದು ವರ್ಷ ಸಾದಾ ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಿ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಕೊಪ್ಪ ಗ್ರಾಮದ ಲಕ್ಷ್ಮಮ್ಮ ಎಂಬ ಮಹಿಳೆ ಶಿಕ್ಷೆಗೊಳಗಾಗಿದ್ದಾರೆ. ಆ ಮೂಲಕ ಸರ್ಕಾರಿ ಜಮೀನನ್ನು ಲಪಟಾಯಿಸಲು ಯತ್ನಿಸುವ ಖಾಸಗಿ ವ್ಯಕ್ತಿಗಳು ಮತ್ತು ಭೂ-ಮಾಫಿಯಾದವರಿಗೂ ಕಟು ಎಚ್ಚರಿಕೆ ರವಾನಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ತಮ್ಮ ಹೇಳಿಕೆಯಲ್ಲಿ ವಿವರಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − eight =
Remember me
