ಬೆಂಗಳೂರು:ಸೂಕ್ಷ್ಮ ಪರಿಸರ ವಲಯದಲ್ಲಿ ನಿಯಮ ಉಲ್ಲಂಘಿಸಿ ಚಿತ್ರನಟ ಗೋಲ್ಡನ್ ಸ್ಟಾರ್ ಗಣೇಶ್ ನಿರ್ಮಿಸುತ್ತಿರುವ ಕಟ್ಟಡದ ಅನುಮತಿ ರದ್ದುಗೊಳಿಸಲು ಸೂಚಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಗುಂಡ್ಲುಪೇಟೆಯ ಜಕ್ಕಹಳ್ಳಿ ಜಮೀನು ಖರೀದಿಸಿರುವ ನಟ ಗೋಲ್ಡನ್ ಸ್ಟಾರ್ ಗಣೇಶ್ ಮೊದಲು ತಾತ್ಕಾಲಿಕ ಶೆಡ್ ನಿರ್ಮಾಣಕ್ಕೆ ಅರಣ್ಯ ಇಲಾಖೆ ಅನುಮತಿ ಕೋರಿದ್ದರು. ನಿಯಮಾನುಸಾರ ಅನುಮತಿ ನೀಡಲಾಗಿತ್ತು. ಆದರೆ ಶಾಶ್ವತ ಕಟ್ಟಡ ನಿರ್ಮಾಣ ಮಾಡುತ್ತಿರುವುದರಿಂದ ಅವರಿಗೆ ನೀಡಿರುವ ಅನುಮತಿ ರದ್ದುಗೊಳಿಸಲಾಗಿತ್ತು. ನಂತರ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದು, ಪ್ರಕರಣ ನ್ಯಾಯಾಲಯದಲ್ಲಿದೆ. ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಖಂಡ್ರೆ ಉತ್ತರಿಸಿದರು. ಗಣೇಶ್ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆಯ ಜಕ್ಕಹಳ್ಳಿ ಗ್ರಾಮದಲ್ಲಿ ಬೃಹತ್ ಕಟ್ಟಡ ನಿಮಾಣ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 3 =
Remember me
