ಮಂಗಳೂರು:ತುಳು ಚಿತ್ರರಂಗದ ನಟ ಸುರೇಂದ್ರ ಬಂಟ್ವಾಳ್ ಬುಧವಾರ ಬರ್ಬರವಾಗಿ ಹತ್ಯೆಯಾಗಿದ್ದರು. ಈ ಕೊಲೆಯನ್ನು ನಾನೇ ಮಾಡಿದ್ದು ಎಂದು ಆತನ ಸ್ನೇಹಿತನೊಬ್ಬ ಪೊಲೀಸರಿಗೆ ಕಳುಹಿಸಿದ್ದಾನೆ ಎನ್ನಲಾದ ಆಡಿಯೋ ಲಭ್ಯವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್​ನಲ್ಲಿರುವ ತನ್ನ ಫ್ಲಾಟ್​ನಲ್ಲೇ ಸುರೇಂದ್ರ ಬಂಟ್ವಾಳ್ ಕೊಲೆಯಾಗಿದ್ದರು. ಸುರೇಂದ್ರನನ್ನು ಕೊಂದದ್ದು ತಾನೇ ಎಂದಿರುವ ಆರೋಪಿ ಸತೀಶ್ ಕುಲಾಲ್, ಕಳಿಸಿರುವ ಆಡಿಯೊ ಸಂದೇಶದಲ್ಲಿ ಏನಿದೆ ಗೊತ್ತಾ?
‘ನಮಸ್ತೆ ನಾನು ಸತೀಶ್ ಮಾತನಾಡೋದು. ನಿನ್ನೆ ರಾತ್ರಿ ವಸ್ತಿ ಅಪಾರ್ಟ್ಮೆಂಟ್ ನಲ್ಲಿ ಸುರೇಂದ್ರನ ಹತ್ಯೆಯಾಗಿದೆ. ಇದನ್ನು ನಾನೇ ಮಾಡಿದ್ದು. ಇದು ಕಿಶನ್ ಹೆಗ್ಡೆ ಸಾವಿನ ಪ್ರತೀಕಾರ. ಸುರೇಂದ್ರ ಬಡ್ಡಿ ವ್ಯವಹಾರ ಮಾಡಿ ಅದನ್ನು ಇಂತಹ ಪಾಪದ ಜನರ ಸಾವಿಗೆ ಉಪಯೋಗಿಸುತ್ತಿದ್ದ. ನಾನು 22 ವರ್ಷದಿಂದ ಸುರೇಂದ್ರನ ಜತೆಯಲ್ಲೇ ಇದ್ದವನು. ಅವನ ಎಲ್ಲ ಅವ್ಯವಹಾರಗಳೂ ಗೊತ್ತಿತ್ತು. ಮೊನ್ನೆ ನಡೆದ ಕಿಶನ್ ಹೆಗ್ಡೆ ಕೊಲೆಯಲ್ಲಿ ಇವನು ಹಣದ ಸಹಾಯ ಮಾಡಿದ್ದ. ವಿಷಯ ನನಗೆ ತಿಳಿದಿತ್ತು. ನಾನು ಅವನ ಹತ್ತಿರ ಹೇಳಿದ್ದೆ. ನೀನು ತಪ್ಪು ಮಾಡ್ತಾ ಇದ್ದೀಯಾ ಸುರೇಂದ್ರ. ನಿನಗೆ ಬೇಡದ ವಿಷಯ. ಆಗ ಈ ವಿಷಯ ಹೊರಗಡೆ ಹೇಳಿದ್ರೆ ನಿನ್ನನ್ನು ಸಾಯಿಸುತ್ತೇನೆ ಅಂತಾ ಬೆದರಿಕೆ ಹಾಕಿದ್ದ. ಮೊನ್ನೆ ಅನಾಮಿಕನಿಗೆ ಕರೆ ಮಾಡಿ ಜೈಲಿನಲ್ಲಿರೋ ಮನೋಜನಿಗೆ ಹಣ, ಬಟ್ಟೆ ಕೊಡಲಿಕ್ಕಿದೆ. ಇದಕ್ಕೆ ನಿಮ್ಮ ಸಹಾಯ ಬೇಕು ಅಂತಾ ಹೇಳುತ್ತಿದ್ದ. ಮತ್ತೊಂದು ದಿನ ಅವರಿಗೆ ಕರೆ ಮಾಡಿ ಬಟ್ಟೆ, ಹಣ ತಲುಪಿಸಿದ್ದೇನೆ. ಸಹಾಯ ಮಾಡಿದ್ದಕ್ಕಾಗಿ ಥ್ಯಾಂಕ್ಸ್ ಅಂತಾ ಹೇಳಿದ್ದನ್ನು ನಾನು ಕೇಳಿದ್ದೇನೆ. ಮತ್ತೆ ಈ ವಿಚಾರದಲ್ಲಿ ನಾನು ಕಿಶನ್​ನ ಗೆಳೆಯನಿಗೆ ಕರೆ ಮಾಡಿ ತಿಳಿಸಿದೆ. ಅವನಿಗೆ ಈ ವಿಚಾರದಲ್ಲಿ ಕೋಪ ಮತ್ತು ಬೇಸರ ಕೂಡ ಇತ್ತು. ಸುರೇಂದ್ರ ಮತ್ತು ಕೋಡಿಕೆರೆ ಮನೋಜನಿಂದ ಹಲವು ಯುವಕರ ಕೊಲೆಯಾಗುತ್ತಿದ್ದರು. ಅದಕ್ಕಾಗಿ ನಾವೇ ಸುರೇಂದ್ರನನ್ನು ಕೊಂದೆವು. ನಾವೀಗ ಕಾರವಾರದಲ್ಲಿದ್ದೇವೆ. ನಮಗೆ ಏನು ಮಾಡಬೇಕೆಂದು ತೋಚದೆ ಇಲ್ಲಿಗೆ ಬಂದಿದ್ದೇವೆ. ಇನ್ನೊಂದೆರಡು ದಿವಸದಲ್ಲಿ ಪೊಲೀಸರಿಗೆ ಶರಣಾಗುತ್ತೇವೆ’ ಎಂದು ಆಡಿಯೋದಲ್ಲಿದೆ.
ಚಿತ್ರ ನಟ ಸುರೇಂದ್ರ ಬಂಟ್ವಾಳ್​ ಬರ್ಬರ ಹತ್ಯೆ!

‘ಧಮ್ಕಿಗಿಮ್ಕಿ ಹಾಕಿದ್ರೆ ಪೊಲೀಸ್​ ಸ್ಟೇಷನ್​ ಮುಂದೆಯೇ ಚುನಾವಣೆ! ಮುನಿರತ್ನಗೆ ಇದು ಕೊನೇ ವಾರ್ನಿಂಗ್​’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + twelve =
Remember me
