ಬೆಂಗಳೂರು:ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದರ ವಿರುದ್ಧ ಚಿತ್ರ ರಂಗ, ಕನ್ನಡ ಸಂಘಟನೆಗಳು ದನಿ ಎತ್ತಿ ಹೋರಾಟಕ್ಕಿಳಿದಿವೆ. ಈ ಬೆಳವಣಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ಗೆ ಸಿಟ್ಟುತರಿಸಿದೆ.
ಚಿತ್ರರಂಗ, ಕನ್ನಡಪರ ಸಂಘಟನೆಗಳು ಈಗ ಬಹಳ ಚೆನ್ನಾಗಿ ರೋಷಾವೇಶ ತೋರುತ್ತಿವೆ. ಬಹಳ ಸಂತೋಷ. ಅವರ ವಿಚಾರಗಳು ಈಗ ಹೊರಗೆ ಬರುತ್ತಿರುವುದಕ್ಕೆ ಸಂತೋಷವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ ಅಸಮಾಧಾನ ಹೊರಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮೇಕೆದಾಟು ಯೋಜನೆಗೆ ಆಗ್ರಹಿಸಿ ನೀರಿಗಾಗಿ ನಾವು ಹೆಜ್ಜೆ ಹಾಕಿದಾಗ ಇವರೆಲ್ಲ ಎಲ್ಲಿದ್ದರು, ಎಲ್ಲಿಗೆ ಹೋಗಿದ್ದರು? ಆಗಲೂ ಕೆಲವು ಸ್ವಾಮೀಜಿಗಳು ನಮ್ಮ ಹೋರಾಟಕ್ಕೆ ಬೆಂಬಲ ನೀಡಿದ್ದರು. ನಾನು ಆ ಹೋರಾಟವನ್ನು ನನ್ನ ಸ್ವಾರ್ಥಕ್ಕೆ ಮಾಡಿದ್ದೆನಾ? ಆಗ್ಯಾಕೆ ಇವರು ಧ್ವನಿ ಎತ್ತಲಿಲ್ಲ? ಎಂದು ಪ್ರಶ್ನಿಸಿದರು.
ವಿರೋಧ ಪಕ್ಷದಲ್ಲಿರುವವರು ನಮ್ಮನ್ನು ದೂಷಣೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ರಾಜ್ಯದ ಜನರು ಹಾಗೂ ರೈತರ ರಕ್ಷಣೆಗೆ ಬದ್ಧವಾಗಿದ್ದು, ನಮ್ಮ ಕಾನೂನು ತಜ್ಞರ ವಾದ ನಮಗೆ ತೃಪ್ತಿ ಇದೆ. ಕುಮಾರಸ್ವಾಮಿ ಹಾಗೂ ಬೊಮ್ಮಾಯಿ ಅವರು ಯಾವ ವಕೀಲರನ್ನು ನೇಮಿಸಿದ್ದರೋ ಅದೇ ವಕೀಲರನ್ನು ಇಟ್ಟುಕೊಂಡೇ ನಾವು ಕಾನೂನು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:19 − eleven =
Remember me
