ಬೆಂಗಳೂರು:ಸ್ಯಾಂಕಿ ಕೆರೆ ರಸ್ತೆ ಅಗಲೀಕರಣ ಮತ್ತು ಸೇತುವೆ ನಿರ್ಮಾಣದ ವಿರುದ್ಧ ಪ್ರತಿಭಟನೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ 30 ಮಂದಿಯ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.
ಫೆ.20ರ ಬೆಳಗ್ಗೆ 8 ಗಂಟೆಯಲ್ಲಿ ಭಾಷ್ಯಂ ಸರ್ಕಲ್‌ನಲ್ಲಿ ಡಿ.ಕೆ.ಶಿವಕುಮಾರ್​ ನೇತೃತ್ವದಲ್ಲಿ ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ರಮೇಶ್ ಬಾಬು, ಉಮಾ ಬಾಯಿ, ಅನೂಪ್ ಅಯ್ಯಂಗರ್, ರಶ್ಮಿ ಸೇರಿದಂತೆ 30 ಮಂದಿ ರಸ್ತೆ ಅಗಲೀಕರಣ ಮತ್ತು ಸೇತುವೆ ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸಿದ್ದರು.
ಈ ಕುರಿತು ವೈಯಾಲಿಕಾವಲ್ ಠಾಣೆ ಪೊಲೀಸರು ಸ್ವಯಂದೂರು ದಾಖಲಿಸಿಕೊಂಡಿದ್ದಾರೆ. ಡಿಕೆಶಿ, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ರಮೇಶ್ ಬಾಬು ಸೇರಿದಂತೆ 30 ಮಂದಿಯ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ. ಅನುಮತಿ ಪಡೆಯದೆ ಅತಿಕ್ರಮವಾಗಿ ಗುಂಪು ಸೇರಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪರಿಣಾಮ ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿದ್ದು, ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಬರ್ತ್​ಡೇ ಪಾರ್ಟಿಯಲ್ಲಿ ಚಿತ್ರನಟನ ಮೇಲೆ ಹಲ್ಲೆ; ಆಡಿ ಕಾರಿನ ಗಾಜುಗಳು ಧ್ವಂಸ

ಹಠಾತ್ ಹೃದಯಾಘಾತಕ್ಕೆ ಮತ್ತೆರಡು ಬಲಿ; ಕ್ರಿಕೆಟ್​ ಆಡುತ್ತಲೇ ಕುಸಿದು ಬಿದ್ದ ಆಟಗಾರರ ಸಾವು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:14 − 3 =
Remember me
