ತುಮಕೂರು:ಮಾಜಿ ಶಾಸಕ ಬಿ.ಸುರೇಶ್​ಗೌಡ ಕೊಲೆಗೆ ಸುಪಾರಿ ನೀಡಿದ ಆರೋಪ ಹಿನ್ನೆಲೆಯಲ್ಲಿ ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್​ ವಿರುದ್ಧ ಕ್ಯಾತಸಂದ್ರ ಠಾಣೆಯಲ್ಲಿ ಗುರುವಾರ ಎಫ್​ಐಆರ್​ ದಾಖಲಾಗಿದೆ. ಅತ್ತ ಸುರೇಶ್​ಗೌಡ ವಿರುದ್ಧವೂ ಹೆಬ್ಬೂರು ಠಾಣೆಯಲ್ಲಿ ಶುಕ್ರವಾರ ಎಫ್​ಐಆರ್​ ದಾಖಲಾಗಿದೆ!
ಗೌರಿಶಂಕರ್​ ದೂರು: ಶಾಸಕ ಡಿ.ಸಿ.ಗೌರಿಶಂಕರ್​ ಉದ್ಯಮಿ ಬೊಮ್ಮನಹಳ್ಳಿ ಬಾಬು ಹಾಗೂ ವಕೀಲ ಹಿರೇಹಳ್ಳಿ ಮಹೇಶ್​ ಅವರು ನನ್ನ ಕೊಲೆಗೆ ಸುಪಾರಿ ನೀಡಿದ್ದಾರೆ ಎಂದು ಜಿಲ್ಲಾ ಪೊಲೀಸ್​ ಅಧೀಕ್ಷಕ ರಾಹುಲ್​ಕುಮಾರ್​ಗೆ ಮಾಜಿ ಶಾಸಕ ಬಿ.ಸುರೇಶ್​ಗೌಡ ದೂರು ನೀಡಿದ್ದರು. ಕೊಲೆಗೆ ಸುಪಾರಿ ನೀಡಿದ್ದಾರೆ ಎಂದು ತುಮಕೂರು ತಾಲೂಕು ಅರೆಯೂರಿನಲ್ಲಿ ಇತ್ತೀಚಿಗೆ ನಡೆದಿದ್ದ ಕಾರ್ಯಕ್ರಮದಲ್ಲಿ ಸುರೇಶ್​ಗೌಡ ಮಾಡಿದ ಆರೋಪ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ನಂತರ ಪರಸ್ಪರ ಆರೋಪ, ಪ್ರತ್ಯಾರೋಪದ ಜತೆಗೆ ದೂರು ಕೂಡ ದಾಖಲಿಸಿದ್ದರು.
ಸುರೇಶ್​ಗೌಡ ನೀಡಿದ ದೂರಿನ ಹಿನ್ನೆಲೆಯಲ್ಲಿ ಗುರುವಾರಷ್ಟೇ ಶಾಸಕ ಡಿ.ಸಿ.ಗೌರಿಶಂಕರ್​ ವಿರುದ್ಧ ಕ್ಯಾತಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕ್ಷೇತ್ರದ ಇಬ್ಬರೂ ನಾಯಕರ ಸ್ವಪ್ರತಿಷ್ಠೆಗೆ ಪೊಲೀಸರು ಹೈರಾಣಾಗಿದ್ದಾರೆ.
ಶಾಸಕ ಗೌರಿಶಂಕರ್​ ರಾಜಕೀಯ ವೈಷಮ್ಯದಿಂದ ಕೊಲೆ ಮಾಡಲು ಜೈಲಿನಲ್ಲಿರುವ ಕೈದಿಗೆ 5ಕೋಟಿ ರೂ. ಸುಪಾರಿ ನೀಡಿದ್ದಾರೆ ಎಂದು ಸುರೇಶಗೌಡ ದೂರು ನೀಡಿದ್ದರು.
ಇದಕ್ಕೆ ಪ್ರತಿಯಾಗಿ ಸುರೇಶ್​ಗೌಡ ಮಾತನಾಡಿದ್ದಾರೆ ಎಂಬ ಆಡಿಯೋವನ್ನು ಶಾಸಕ ಡಿ.ಸಿ.ಗೌರಿಶಂಕರ್​ ಬಿಡುಗಡೆ ಮಾಡಲಾಗಿದ್ದು, ಈ ಆಡಿಯೋದಲ್ಲಿ ಲಾರಿ ಹತ್ತಿಸಿ ಕೊಲೆ ಮಾಡುವ ಬಗ್ಗೆ ಮಾತನಾಡಿದ್ದಾರೆ ಎಂದು ದೂರಿದ್ದರು. ಈ ಆಡಿಯೋ ನಕಲಿ ಎಂದು ಸುರೇಶ್​ಗೌಡ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಪ್ರಸ್ತುತ ತುಮಕೂರು ತಾಲೂಕು ಹೆಬ್ಬೂರು ಠಾಣೆಯಲ್ಲಿ ಸುರೇಶ್​ಗೌಡ ವಿರುದ್ಧ ಕಲಂ120(ಬಿ),ಐಪಿಸಿ 506ರ ಅಡಿಯಲ್ಲಿ ಎಫ್​ಐಆರ್​ ದಾಖಲಾಗಿದೆ.
ನಾನು ಮದ್ವೆ ಆಗ್ಬೇಕು, ಪ್ಲೀಸ್​ ಹೆಣ್ಣು ಹುಡುಕಿ ಕೊಡಿ ಸಾರ್… ಶಿವಮೊಗ್ಗ ಎಸ್ಪಿಗೆ ಜಾತಕ ಕೊಟ್ಟು ಅರ್ಜಿ ಸಲ್ಲಿಸಿದ ಯುವಕ!

ಉಡುಪಿಯಲ್ಲಿ ದುರಂತ: ಮದ್ವೆ ಮುನ್ನಾ ದಿನದ ರೋಸ್ ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಯುವತಿ ಸಾವು!

ರಾಮನಗರದಿಂದ ಶಬರಿಮಲೆಗೆ ಹೋಗಿದ್ದವರ ಮಿನಿ ಬಸ್​ಅಪಘಾತ: 20ಕ್ಕೂ ಹೆಚ್ಚು ಜನರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + seven =
Remember me
