ದಕ್ಷಿಣಕನ್ನಡ:ಬಿಜೆಪಿ ಶಾಸಕ, ಬೆಳ್ತಂಗಡಿಯ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಳ್ತಂಗಡಿಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಮಿತಾ ಕೆ. ಪೂಜಾರಿ ನೀಡಿದ್ದ ದೂರಿನ ಮೇರೆಗೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಐಪಿಸಿ ಕಲಂ 153, 153ಎ, 505ರ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ಕಿನ್ಯಮ್ಮ ಸಭಾಭವನದಲ್ಲಿ ನಡೆದ ಬಿಜೆಪಿಯ ಅಭಿನಂದನಾ ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ಕೋಮು ಪ್ರಚೋದಕ ಹಾಗೂ ದ್ವೇಷ ಉಂಟಾಗುವ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ನಮಿತಾ ಪೂಜಾರಿ ದೂರು ನೀಡಿದ್ದರು.
ಇದನ್ನೂ ಓದಿ:ಪೂಜೆಯಿಂದಾಗಿ ಪ್ರಾಣಾಪಾಯದಿಂದ ಪಾರಾದ ಉದ್ಯಮಿ!; ಆಗಿದ್ದೇನು?​
24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎನ್ನುವ ಮೂಲಕ ಸಿಎಂ ವಿರುದ್ಧವೇ ಕೊಲೆ ಆರೋಪ ಮಾಡಿದ್ದ ಪೂಂಜಾ, ಕಾಂಗ್ರೆಸ್ ಪರ ಪ್ರಚಾರ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಸತ್ಯಜಿತ್ ಸುರತ್ಕಲ್ ಎಂಬ ಹಿಂದೂ ನಾಯಕ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಾರೆ, 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟ್ ಕೇಳಿದ್ದೀರ, ಬಜರಂಗ ದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರ, ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ ಎಂದೆಲ್ಲ ಶಾಸಕರು ಭಾಷಣದಲ್ಲಿ ಮಾತಾಡಿದ್ದರ ಹಿನ್ನೆಲೆಯಲ್ಲಿ ದೂರು ನಮಿತಾ ದೂರು ನೀಡಿದ್ದರು.
ದಂಪತಿ ಮಧ್ಯೆ ಪ್ರೀತಿ ಇದ್ದರೂ ದಾಂಪತ್ಯ ದ್ರೋಹ; ವಿವಾಹೇತರ ಸಂಬಂಧದ ಬಗ್ಗೆ ಇಲ್ಲ ಪಶ್ಚಾತ್ತಾಪ: ಏನಿದು ಅಧ್ಯಯನ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + nine =
Remember me
