ಬೆಂಗಳೂರು:ಕಾಂಗ್ರೆಸ್​ ಮುಖಂಡರಿಬ್ಬರ ವಿರುದ್ಧ ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಅವರ ವಿರುದ್ಧ ಸುಳ್ಳು ಆರೋಪ ಹೊರಿಸಿ, ಬಿಜೆಪಿ ಶಾಸಕರ ನಕಲಿ ಸಹಿ ಬಳಸಿ ಸುಳ್ಳು ದಾಖಲೆ ಬಿಡುಗಡೆ ಮಾಡಿರುವ ಆರೋಪದ ಮೇರೆಗೆ ವಕೀಲ ಜಿ. ದೇವೇಗೌಡ ಎಂಬುವರು ಕೊಟ್ಟ ದೂರಿನನ್ವಯ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮತ್ತು ಮಂಜುಳಾ ಮಾನಸಾ ಅವರ ವಿರುದ್ಧ ಕೇಸ್​ ದಾಖಲಾಗಿದೆ.ಇದನ್ನೂ ಓದಿರಿರಂಗೇರೇತ್ತಿದೆ ಹಳ್ಳಿ ಫೈಟ್​, ಗ್ರಾಪಂ ಚುನಾವಣೆ ಯಾವಾಗ ಗೊತ್ತಾ?
ಲಕ್ಷ್ಮಣ್ ಅವರು ಮೈಸೂರಿನ ಕಾಂಗ್ರೆಸ್​ ಕಚೇರಿಯಲ್ಲಿ ಆ.26ರಂದು ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ, “ಸೂಪರ್​ ಸಿಎಂ ಬಿ.ವೈ. ವಿಜಯೇಂದ್ರ ದರ್ಬಾರ್​’ ಎಂಬ ಐದು ಪುಟಗಳ ನಕಲಿ ದಾಖಲೆ ಬಿಡುಗಡೆ ಮಾಡಿದ್ದರು. ಇದರಲ್ಲಿ ಬಿಜೆಪಿ ಶಾಸಕರು ಸಹಿ ಮಾಡಿ, ಹೈಕಮಾಂಡ್​ಗೆ ದೂರು ನೀಡಿದ್ದರು ಎಂದು ಸುಳ್ಳು ಆರೋಪ ಮಾಡಿದ್ದಾರೆ. ಬಿಜೆಪಿ ಶಾಸಕರದ್ದು ಎನ್ನಲಾದ ನಕಲಿ ಸಹಿ ಇರುವ ದಾಖಲೆ ಪತ್ರಗಳನ್ನು ಬಿಡುಗಡೆ ಮಾಡಿ, ವೈಯಕ್ತಿಕವಾಗಿ ವಿಜಯೇಂದ್ರ ಅವರನ್ನು ನಿಂದಿಸಿದ್ದಾರೆ. ಈ ಮೂಲಕ ವಿಜಯೇಂದ್ರ ಮತ್ತು ಬಿಜೆಪಿ ಪಕ್ಷದ ಗೌರವಕ್ಕೆ ಧಕ್ಕೆ ಉಂಟು ಮಾಡಿರುವ ಲಕ್ಷ್ಮಣ್​ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆರೋಪಿಸಿ ವಕೀಲ ದೇವೇಗೌಡ ಎಂಬುವರು ದೂರು ಕೊಟ್ಟಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಲಾಗುತ್ತಿದೆ ಎಂದು ವಿಧಾನಸೌಧ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಡಿ.ಕೆ.ಶಿವಕುಮಾರ್​ ಮತ್ತೆ ಆಸ್ಪತ್ರೆಗೆ ದಾಖಲು

ರೈತನ ಜಮೀನು ಪಡೆದು ಬರೋಬ್ಬರಿ ನಾಲ್ಕೂವರೆ ಎಕರೆಯಲ್ಲಿ ಗಾಂಜಾ ಬೆಳೆದ ದುಷ್ಕರ್ಮಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
