ಬೆಂಗಳೂರು/ಶಿವಮೊಗ್ಗ:ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ವಕೀಲ ಕೆ.ವಿ.ಪ್ರವೀಣ್ ಎಂಬುವರು ನೀಡಿರುವ ದೂರು ಆಧರಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್​ಐಆರ್ ಹಾಕಿರುವ ಸಾಗರ ಠಾಣೆ ಸಿಪಿಐ ಅಮಾನತು ಮಾಡಬೇಕು ಎಂದು ರಾಜ್ಯ ಕಾಂಗ್ರೆಸ್ ಆಗ್ರಹಿಸಿದೆ.
ಪಿಎಂ ಕೇರ್ಸ್ ಫಂಡ್ ಅನ್ನು ಪ್ರಧಾನಿ ಮೋದಿ ಸದುಪಯೋಗ ಮಾಡುತ್ತಿಲ್ಲ. ಪಿಎಂ ಕೇರ್ಸ್ ಫ್ರಾಡ್ ಆಗಿದೆ ಎಂದು ಮೋದಿ ವಿರುದ್ಧ ಅವಹೇಳನಕಾರಿ ಚಿತ್ರ ಬರಹ ಹಾಕುತ್ತಿರುವ ಃಐಘಇಐಛಜಿಚ ಟ್ವಿಟರ್ ಖಾತೆ ನಿರ್ವಾಹಕರು, ಅಧ್ಯಕ್ಷರು ಮತ್ತು ಸಂಬಂಧಪಟ್ಟ ಸಿಬ್ಬಂದಿ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರವೀಣ್ ಸಾಗರ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ನೀಡಿದ್ದು, ಎಫ್​ಐಆರ್ ಹಾಕಲಾಗಿದೆ. ಈ ಸಂಬಂಧ ಸಿಎಂ ಯಡಿಯೂರಪ್ಪ ಹಾಗೂ ಪೊಲೀಸ್ ಮಹಾ ನಿರ್ದೇಶಕರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ, ಎಫ್​ಐಆರ್ ರದ್ದು ಮಾಡಬೇಕು ಹಾಗೂ ಸಾಗರ ಠಾಣೆ ಅಧಿಕಾರಿಯನ್ನು ಕೂಡಲೆ ಅಮಾನತು ಮಾಡಬೇಕೆಂದು ಒತ್ತಾಯಿಸಿದರು. ರಾಜಕೀಯ ದುರುದ್ದೇಶದಿಂದ ಕೂಡಿದ ದೂರು ಇದಾಗಿದೆ. ಇದಕ್ಕೆ ಕಾರಣರಾದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಸೋನಿಯಾ ಗಾಂಧಿ ವಿರುದ್ಧ ಎಫ್​ಐಆರ್ ದಾಖಲಿಸುವ ಮೂಲಕ ಹದ್ದು ಮೀರಿ ವರ್ತಿಸಿರುವ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಬೇಕೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಆಗ್ರಹಿಸಿದ್ದಾರೆ. ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸದಿದ್ದಲ್ಲಿ ಹೋರಾಟ ಅನಿವಾರ್ಯ ಎಂದಿದ್ದಾರೆ.
ಶಿವಮೊಗ್ಗದಲ್ಲಿ ಪ್ರತಿಭಟನೆ
ಎಐಸಿಸಿ ಅಧ್ಯಕ್ಷರ ವಿರುದ್ಧ ನೀಡಿರುವ ದೂರನ್ನು ಪರಿ ಶೀಲಿಸಿ ನೈಜತೆ ಅರಿಯುವ ಮುನ್ನವೇ ಎಫ್​ಐಆರ್ ದಾಖಲಿಸಿರುವುದು ಅಕ್ಷಮ್ಯ ಎಂದು ಆರೋಪಿಸಿದ ಕಾಂಗ್ರೆಸ್ ಮುಖಂಡರು ಸಾಗರ ಹಾಗೂ ಶಿವಮೊಗ್ಗದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್. ಸುಂದರೇಶ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಗ್ರಾಮಸ್ಥರ ಪ್ರತಿಭಟನೆಗೆ ಬೆಚ್ಚಿ 5 ತಾಸು ಬಸ್​ನಲ್ಲೇ ಕುಳಿತರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 12 =
Remember me
