ಬೆಂಗಳೂರು:ನಮ್ಮ ಮೆಟ್ರೋ ರೈಲಿನೊಳಗೆ ಅನಾರೋಗ್ಯದಿಂದ ವೃದ್ಧರೊಬ್ಬರು ಕುಸಿದು ಬಿದ್ದು ಕೆಲವು ಗಂಟೆಗಳ ನಂತರ ಸಾವನ್ನಪ್ಪಿದ ಘಟನೆ ನಡೆದಿದೆ. ಸಾವಿಗೆ ಕಾರಣವಾದ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಸಿಬ್ಬಂದಿ ನಿರ್ಲಕ್ಷ್ಯದ ವಿರುದ್ಧ ಪೊಲೀಸರು ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ATM ಒಳಗೆ ಹೋದಾಗ ಅಪಹರಣ​: ಇಡೀ ರಾತ್ರಿ ಬೆಟ್ಟದಲ್ಲಿ ನಡೆದ ಕರಾಳ ಘಟನೆ ಬಿಚ್ಚಿಟ್ಟ ಮಣಿಪುರದ ಯುವತಿ
ಜುಲೈ 20ರಂದು ಮೆಟ್ರೋ ರೈಲಿನಲ್ಲಿ 67 ವರ್ಷದ ವ್ಯಕ್ತಿ ಕುಸಿದು ಬಿದ್ದು, ಆಸ್ಪತ್ರೆಗೆ ತಲುಪಿದ ನಂತರ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿತ್ತು. ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತದ (ಬಿಎಂಆರ್‌ಸಿಎಲ್‌) ಸಿಬ್ಬಂದಿ ಸಕಾಲದಲ್ಲಿ ವೈದ್ಯಕೀಯ ನೆರವು ನೀಡಲು ವಿಫಲರಾದ ಕಾರಣ ತಂದೆ ತಿಮ್ಮೇಗೌಡ (67) ಮೃತಪಟ್ಟಿದ್ದಾರೆ ಎಂದು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪುತ್ರ ಇನ್ಸ್ಪೆಕ್ಟರ್ ಮುತ್ತುರಾಜ್ ದೂರು ಸಲ್ಲಿಸಿದ್ದಾರೆ.

ನಡೆದಿದ್ದೇನು?:ತಿಮ್ಮೇಗೌಡ ಅವರು ಜುಲೈ 20 ರಂದು ರಾತ್ರಿ 9 ಗಂಟೆ ಸುಮಾರಿಗೆ ಕೆಂಗೇರಿಗೆ ತೆರಳಲು ಬೈಯಪ್ಪನಹಳ್ಳಿಯಲ್ಲಿ ಮೆಟ್ರೋ ಹತ್ತಿದ್ದರು. ಇದ್ದಕ್ಕಿದ್ದ ಹಾಗೇ ಏದೆ ನೋವು ಕಾಣಿಸಿಕೊಂಡು ತಿಮ್ಮೇಗೌಡ ಅವರು ಕುಸಿದು ಬಿದ್ದಿದ್ದಾರೆ. ಮೆಟ್ರೋ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆ ಬರದ ಕಾರಣ, ಸಹಪ್ರಯಾಣಿಕರು ಮಾರ್ಗದ ಮುಂದಿನ ನಿಲ್ದಾಣವಾದ ಎಂಜಿ ರಸ್ತೆ ನಿಲ್ದಾಣದಲ್ಲಿ ತಿಮ್ಮೇಗೌಡ ಅವರನ್ನು ಇಳಿಸಲು ನಿರ್ಧರಿಸಿದರು.
ಇದನ್ನೂ ಓದಿ:ನೀನು ಮುಸ್ಲಿಂ..ಬುರ್ಖಾ ಧರಿಸದಿದ್ದರೇ ಬಸ್ ಹತ್ತಲು ಬಿಡುವುದಿಲ್ಲವೆಂದು ವಿದ್ಯಾರ್ಥಿನಿಯನ್ನು ಕೆಳಗಿಳಿಸಿದ ಬಸ್​​ ಚಾಲಕ
ತಿಮ್ಮೇಗೌಡ ಅವರನ್ನು ಸುಮಾರು 15-20 ನಿಮಿಷಗಳ ಕಾಲ ಯಾವುದೇ ಸಹಾಯವಿಲ್ಲದೆ ಫ್ಲಾಟ್ ಫಾರ್ಮ್ ನಲ್ಲಿ ಮಲಗಿಸಲಾಗಿತ್ತು. ಆದರೆ ಸೆಕ್ಯುರಿಟಿಗಳು ಕೂಡ ಸಹಾಯಕ್ಕೆ ಬಾರದೆ ನಿರ್ಲಕ್ಷ್ಯ ವಹಿಸಿದ್ದರು. ಹೀಗಾಗಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ತಂದೆ ಮೃತಪಟ್ಟಿದ್ದಾರೆ ಎಂದು ಪುತ್ರ ಇನ್ಸ್ಪೆಕ್ಟರ್ ಮುತ್ತುರಾಜ್ ಆರೋಪಿಸಿದ್ದಾರೆ.
ಇದನ್ನೂ ಓದಿ:ಡ್ಯಾನ್ಸ್​, ಜಗಳ ಎಲ್ಲಾ ಆಯ್ತು; ಈಗ ಮೆಟ್ರೋದಲ್ಲಿ ಭಿಕ್ಷೆ ಬೇಡುತ್ತಿರುವ ವೃದ್ಧ
ಈ ಘಟನೆಯ ಬಗ್ಗೆ ಮೆಟ್ರೋ ಅಧಿಕಾರಿಗಳು ಇನ್ನೂ ಅಧಿಕೃತ ಹೇಳಿಕೆಯನ್ನು ನೀಡಬೇಕಾಗಿದೆ. ಬೆಂಗಳೂರು ಮೆಟ್ರೋ ಅಧಿಕಾರಿಗಳ ವಿರುದ್ಧ ಐಪಿಸಿ ಸೆಕ್ಷನ್ 304ಎ (ನಿರ್ಲಕ್ಷ್ಯದಿಂದ ಸಾವು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೋಟಿ ಕೋಟಿ ಖರ್ಚು ಮಾಡಿ ನಿರ್ಮಿಸಿರುವ ಮೆಟ್ರೋದಲ್ಲಿ ಸಹಾಯಕ್ಕೆ ಯಾರು ಇಲ್ಲಾ. ಅರೋಗ್ಯದಲ್ಲಿ ಏರುಪೇರಾದ್ರೆ ಆಸ್ಪತ್ರೆಗೆ ಸಾಗಿಸಲು ಯಾರು ಇಲ್ಲಾ. ಒಂದು ಆಂಬುಲೆನ್ಸ್ ಸಹ ಇಲ್ಲಾ ಎನ್ನವ ಆರೋಪ ಕೇಳಿ ಬಂದಿದೆ.
ನಾನು ಶುದ್ಧ ಸಸ್ಯಾಹಾರಿ, ವಿದೇಶಕ್ಕೆ ಹೋಗುವಾಗ ಸ್ಪೂನ್‌ ಕೂಡ ಹಿಡ್ಕೋತೀನಿ; ಟ್ರೋಲ್​​ ಆದ ಸುಧಾಮೂರ್ತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − seven =
Remember me
