ಬೆಂಗಳೂರು:ಇತ್ತೀಚಿನ ದಿನಗಳಲ್ಲಿ ನಮ್ಮ ಮೆಟ್ರೋ ರೈಲಿನಲ್ಲಿ ಮಹಿಳಾ ಪ್ರಯಾಣಿಕರ ಜೊತೆ ಅನುಚಿತ ವರ್ತನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಬಗ್ಗೆ ನಿರಂತರವಾಗಿ ವರದಿಗಳು ಬರುತ್ತಿವೆ. ಆದರೆ, ಇದೀಗ ಅಧಿಕಾರಿಯೊಬ್ಬರು ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಸುಬ್ರಮ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ Assistant Section Officer ಆಗಿ ಕಾರ್ಯ ನಿರ್ವಹಿಸುತ್ತಿರುವ ಗಜೇಂದ್ರ ಎಂಬುವವರ ವಿರುದ್ಧ ಆರೋಪ ಕೇಳಿ ಬಂದಿದ್ದು, ಈ ಸಂಬಂಧ FIR ದಾಖಲಾಗಿದೆ.
ಅಧಿಕಾರಿ ಗಜೇಂದ್ರ ಮಹಿಳಾ ಸಿಬ್ಬಂದಿಗಳಿಗೆ ಅಶ್ಲೀಲ ಪದಗಳಿಂದ ನಿಂದಿಸುವುದಲ್ಲದೆ ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸಹಕರಿಸದ ಸಿಬ್ಬಂದಿಯನ್ನು ಬೇರೆಡೆ ವರ್ಗಾವಣೆ ಮಾಡುವುದಾಗಿ ಬೆದರಿಸಿದ್ದಾನೆ. ಸೆಕ್ಯೂರಿಟಿ ಏಜೆನ್ಸಿ ಮಾಲೀಕನಿಂದಲೂ ಸಹಕರಿಸುವಂತೆ ಒತ್ತಾಯ ಮಾಡಿದ ಆರೋಪ ಕೇಳಿ ಬಂದಿದೆ. ಸಹಕರಿಸಿ ಇಲ್ಲ ಕೆಲಸದಿಂದ ತೆಗೆಯುತ್ತೇನೆ ಅಂತಾರೆ ಎಂದು ಮಹಿಳಾ ಸಿಬ್ಬಂದಿ ಪೊಲೀಸರು ಹಾಗೂ ಬಿಎಂಆರ್​ಸಿಎಲ್​ ಅಧಿಕಾರಿಗಳಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 3 =
Remember me
