ಬೆಂಗಳೂರು:ಎಚ್​ಎಸ್​ಆರ್​ ಲೇಔಟ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಯುವತಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಂತ್ರಸ್ತೆ, ಆಕೆಯ ಸ್ನೇಹಿತನ ವಿರುದ್ಧವೇ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ.
ಅತ್ಯಾಚಾರ ವೇಳೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಹಾಗೂ ಆತನ ಸ್ನೇಹಿತನ ವಿರುದ್ಧ ಆಟೋ ಚಾಲಕ ನೀಡಿರುವ ದೂರಿನ ಮೇರೆಗೆ ಆಡುಗೋಡಿ ಸಂಚಾರಿ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿದ್ದಾರೆ.
ಇದನ್ನೂ ಓದಿ:ಸಹಪಾಠಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಚಾಕು ಇರಿತ ಕೇಸ್; 4 ದಿನಗಳ ಜೀವನ್ಮರಣ ಹೋರಾಟದ ಬಳಿಕ ಬಾಲಕ ಸಾವು
ಕೋರಮಂಗಲದ ಪಬ್​ ಒಂದರಲ್ಲಿ ಪಾರ್ಟಿ ಮುಗಿಸಿದ ಬಳಿಕ ಯುವತಿ  ತಾನೇ ಕಾರು ಚಾಲನೆ ಮಾಡಿಕೊಂಡು ಹೋಗಿದ್ದಳು. ಈ ವೇಳೆ ಟಾನಿಕ್ ಬಳಿಯ ಮಂಗಳ ಜಂಕ್ಷನ್ ಬಳಿ ಕಾರು ಅಪಘಾತವಾಗಿದ್ದಯು ಮೂರು ವಾಹನಗಳು ಜಖಂಡಗೊಂಡಿದೆ. ಎರಡು ಆಟೋ ಹಾಗೂ ಒಂದು ಬೈಕ್​ಗೆ ಯುವತಿ ಡಿಕ್ಕಿ ಹೊಡೆದಿದ್ದು, ಯುವತಿ ಕಾರನ್ನು ಅಲ್ಲೇ ಬಿಟ್ಟು ಎಸ್ಕೇಪ್​ ಆಗಿದ್ದಾಳೆ. ಆಗ ಯುವತಿ ಜೊತೆಗಿದ್ದ ಆಕೆಯ ಸ್ನೇಹಿತ ಆಟೋ ಹಾಗೂ ಬೈಕ್​ ಮಾಲೀಕರೊಂದಿಗೆ ಮಾತನಾಡಿದ ಪರಿಸ್ಥಿತಿಯನ್ನು ನಿಭಾಯಿಸಿ ಯುವತಿಗಾಗಿ ಹುಡುಕಾಡಿದ್ದಾನೆ.
ಮಂಗಳ ಜಂಕ್ಷನ್​ನಿಂದ ಎಸ್ಕೇಪ್​ ಆದ ಬಳಿಕ ಸಂತ್ರಸ್ತೆ ಡ್ರಾಪ್​ ಕೇಳುತ್ತಿದ್ದುದ್ದನ್ನು ಗಮನಿಸಿದ ಸ್ನೇಹಿತ ಆಕೆಯನ್ನು ವಿಚಾರಿಸಿದಾಗ ಪಬ್​ನಲ್ಲೇ ಮೊಬೈಲ್​ ಬಿಟ್ಟು ಬಂದಿರುವುದಾಗಿ ಹೇಳಿದ್ದಾಳೆ. ನಂತರ ಅಪರಿಚಿತ ವ್ಯಕ್ತಿಯಿಂದ ಡ್ರಾಪ್ ಕೇಳಿ ಅಲ್ಲಿಂದ ಹೊರಟ್ಟಿದ್ದಾಳೆ. ಈ ವೇಳೆ ಯುವತಿಯ ಮೇಲೆ ಅತ್ಯಾಚಾರದ ಯತ್ನ ನಡೆದಿದೆ. ಸದ್ಯ ಆಟೋ ಚಾಲಕ ನೀಡಿದ ದೂರಿನ ಮೇರೆಗೆ ಯುವತಿ ಹಾಗೂ ಆಕೆಯ ಸ್ನೇಹಿತನ ವಿರುದ್ಧ ಆಡುಗೋಡಿ ಸಂಚಾರಿ ಠಾಣೆಯಲ್ಲಿ ಅಜಾಗರೂಕತೆ ಮತ್ತು ಅತಿಯಾದ ಚಾಲನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆ ಚೇತರಿಸಿಕೊಳ್ಳುತ್ತಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + seven =
Remember me
