ಬೆಂಗಳೂರು:ಇತ್ತೀಚೆಗಷ್ಟೇ ಬೆಂಗಳೂರಿನ ನಗರ್ತಪೇಟೆಯ ಅಂಗಡಿಯ ಯುವಕನ ಮೇಲೆ ನಡೆದ ಹಲ್ಲೆಯ ವಿರುದ್ಧ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, “ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ತಮಿಳುನಾಡಿನಿಂದ ಬಂದವರು ಇಲ್ಲಿ ಬಾಂಬ್ ಹಾಕುತ್ತಾರೆ, ದೆಹಲಿಯ ಜನರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗಳನ್ನು ಕೂಗ್ತಾರೆ ಮತ್ತು ಕೇರಳದಿಂದ ಬಂದವರು ಆಸಿಡ್ ದಾಳಿಯಲ್ಲಿ ಭಾಗಿಯಾಗಿದ್ದಾರೆ” ಎಂದು ಹೇಳಿಕೆ ನೀಡಿದ್ದರು.
ಇದನ್ನೂ ಓದಿ:4 ವರ್ಷಗಳಲ್ಲಿ 1 ಲಕ್ಷವಾಯ್ತು 2 ಕೋಟಿ ರೂಪಾಯಿ: 20000% ಏರಿಕೆ ಕಂಡ ಮಲ್ಟಿಬ್ಯಾಗರ್​ ಸ್ಟಾಕ್​ಗೆ ಮತ್ತೆ ಬೇಡಿಕೆ
ಈ ವಿವಾದಾತ್ಮಕ ಹೇಳಕೆಗೆ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಕ್ಷಮೆ ಕೋರಿದ ಶೋಭಾ ಕರಂದ್ಲಾಜೆ, ಹೇಳಿಕೆ ವಾಪಸ್ ಪಡೆದು ಬೇಷರತ್ ಕ್ಷಮೆಯಾಚಿಸಿದರು. ಕೇಂದ್ರ ಸಚಿವೆಯ ಹೇಳಿಕೆಗೆ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಖಂಡಿಸಿದ್ದು, ಚುನಾವಣಾ ಆಯೋಗ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇದೀಗ ಅದಕ್ಕೆ ಅನುಗುಣವಾಗುವಂತೆ ಇಸಿಐ ಕೇಂದ್ರ ಸಚಿವೆ ಹಾಗೂ ಉಡುಪಿ – ಚಿಕ್ಕಮಗಳೂರಿನ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್​ಐಆರ್​ ದಾಖಲಿಸುವಂತೆ ತಿಳಿಸಿತು.
As per ECI direction, DEO Bangalore has filed an FIR against Ms. Shobha Karandlaje, Union Minister and MP u/s 123 (3A), 125 and 123 (3) of RP Act at Cottonpet Police Station of Bengaluru on 21.03.2024.— Chief Electoral Officer, Karnataka (@ceo_karnataka)March 21, 2024
As per ECI direction, DEO Bangalore has filed an FIR against Ms. Shobha Karandlaje, Union Minister and MP u/s 123 (3A), 125 and 123 (3) of RP Act at Cottonpet Police Station of Bengaluru on 21.03.2024.
ಇಸಿಐ ನಿರ್ದೇಶನದ ಮೇರೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಬೆಂಗಳೂರಿನ ಜಿಲ್ಲಾ ಚುನಾವಣಾಧಿಕಾರಿ ಅವರು ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮಾರ್ಚ್ 21ರ ಗುರುವಾರ ಎಫ್‌ಐಆರ್ ರಿಜಿಸ್ಟರ್​ ಮಾಡಿದ್ದಾರೆ,(ಏಜೆನ್ಸೀಸ್).
ಶ್ರೀಲೀಲಾ ಜತೆ ನಟಿಸಲು ಸ್ಟಾರ್​ ನಟರಿಗೆ ಚಿಂತೆ! ಇದು ಮುಂದುವರಿದ್ರೆ ‘ಕಿಸ್’​ ಬೆಡಗಿಗೆ ಸಂಕಷ್ಟ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 11 =
Remember me
