ಬೆಂಗಳೂರು:ಪೈಪ್​ಲೈನ್ ರಸ್ತೆಯ ಚೋಳರಪಾಳ್ಯದಲ್ಲಿ ಇರುವ ಅಗರಬತ್ತಿ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಗೆ 8 ಬೈಕ್​ಗಳು ಸುಟ್ಟಿವೆ.
ಆನೇಕಲ್‌ನ ಅತ್ತಿಬೆಲೆ ಪಟಾಕಿ ಬೆಂಕಿ ದುರಂತ ಮಾಸುವ ಮುನ್ನವೇ ಮತ್ತೇ ಇಂತಹದೇ ಘಟನೆ ನಡೆದಿದೆ. ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಿಂದ ಅಗರಬತ್ತಿ ಹೊತ್ತಿ ಉರಿದ ಘಟನೆ ಜೋಗುಪಾಳ್ಯದ ಪೈಪ್ ಲೈನ್ ರಸ್ತೆಯಲ್ಲಿ ನಡೆದಿದೆ.
ಅವಘಡದಿಂದಾಗಿ ಫ್ಯಾಕ್ಟರಿಯಲ್ಲಿದ್ದ ಕೆಮಿಕಲ್ ಲಿಕ್ವಿಡ್ ಹರಿದು ರಸ್ತೆಗೂ ಬೆಂಕಿ ಹಬ್ಬಿದ್ದು, 8 ಬೈಕ್ ಸುಟ್ಟು ಅಗ್ನಿಗಾಹುತಿಯಾಗಿದೆ.ತಕ್ಷಣ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದು, ಸ್ಥಳಕ್ಕೆ ದೌಡಾಯಿಸಿದ ಎರಡು ಅಗ್ನಿಶಾಮಕ ವಾಹನದ ಸಿಬ್ಬಂದಿ ಬೆಂಕಿ ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + fourteen =
Remember me
