ಬೆಂಗಳೂರು:ಬೆಂಕಿಯ ಕೆನ್ನಾಲಿಗೆಗೆ ಎರಡು ಅಂತಸ್ತಿನ ಕಟ್ಟಡ ಒಂದು ಹೊತ್ತಿ ಉರಿದಿರುವ ಘಟನೆ ಬೆಂಗಳೂರು ನಗರದ ಉಪ್ಪಾರಪೇಟೆ ಪೊಲೀಸ್​ ಠಾಣೆ ವ್ಯಾಪ್ತಿಯ ಬಳೇಪೇಟೆಯಲ್ಲಿ ನಡೆದಿದೆ. ಕಟ್ಟಡದಲ್ಲಿ ಸಿಲುಕಿದ್ದ ಓರ್ವ ವ್ಯಕ್ತಿಯನ್ನು ರಕ್ಷಿಸಲಾಗಿದ್ದು, ಬೆಂಕಿಯನ್ನು ನಂದಿಸುವ ಕಾರ್ಯ ಭರದಿಂದ ಸಾಗಿದೆ.
ಕಟ್ಟಡದಲ್ಲಿದ್ದ ಪೇಂಟಿಂಗ್ ಹಾಗೂ ಬ್ಯಾಗ್​ ಅಂಗಡಿ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ ಎಂದು ವರದಿಯಾಗಿದೆ. ಜನವರಿ 26ರ ತಡರಾತ್ರಿ ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಎರಡು ಅಂತಸ್ತಿನ ಕಟ್ಟಡ ಕೃಷ್ಣಮೂರ್ತಿ ಎಂಬುವರಿಗೆ ಸೇರಿದ್ದು, ಬೆಂಕಿ ಮೊದಲಿಗೆ  ಪೇಂಟ್ ಅಂಗಡಿಯಲ್ಲಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಕಾಲಕ್ರಮೇಣ ಬೆಂಕಿ ಇಡೀ ಕಟ್ಟಡವನ್ನೇ ಆವರಿಸಿದೆ. ವಿಚಾರ ತಿಳಿದು ಅಗ್ನಿಶಾಮಕದಳ ಸ್ಥಳಕ್ಕೆ ದೌಡಾಯಿಸಿದ್ದು, ನಾಲ್ಕು ಘಂಟೆಗಳ ಸತತ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ. ತನಿಖೆಗೆ ಆದೇಶಿಸಲಾಗಿದ್ದು, ಘಟನೆಗೆ ನಿಖರ ಕಾರಣ ಏನು ಎಂಬುದರ ಕುರಿತು ಮುಂದಿನ ದಿನಗಳಲ್ಲಿ ತಿಳಿಯಲಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − four =
Remember me
