ಆನೇಕಲ್:ಚಹಾದಂಗಡಿಯೊಂದರಲ್ಲಿ ಸಂಭವಿಸಿದ ಅಗ್ನಿದುರಂತದಿಂದಾಗಿ ಅಂಗಡಿಯು ಬೆಂಕಿ ಹೊತ್ತಿಕೊಂಡು ಉರಿದಿದೆ. ಮಾತ್ರವಲ್ಲ, ಬಾಲಕಿಯೊಬ್ಬಳು ಬೆಂಕಿಯಿಂದ ಸುಟ್ಟ ಗಾಯಗಳಿಗೆ ಒಳಗಾಗಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಗೊಲ್ಲಹಳ್ಳಿ ಎಂಬಲ್ಲಿ ಈ ಅವಘಡ ಸಂಭವಿಸಿದೆ. ಈ ಅಗ್ನಿ ದುರಂತದಲ್ಲಿ ಅಂಗಡಿ ಮಾಲೀಕರ ಪುತ್ರಿ, 11 ವರ್ಷದ ಪಂಕಜ ಶೇ. 50 ಸುಟ್ಟಗಾಯಗಳಿಗೆ ಒಳಗಾಗಿದ್ದಾಳೆ.
ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಇದರಿಂದಾಗಿ ಗ್ಯಾಸ್ ಸಿಲಿಂಡರ್​ ಸ್ಫೋಟಗೊಂಡಿದ್ದು, ಬೆಂಕಿಯ ಕೆನ್ನಾಲಿಗೆ ಹೊರಹೊಮ್ಮಿದೆ. ಈ ಸಂದರ್ಭದಲ್ಲಿ ಅಂಗಡಿಯೊಳಗೆ ಇದ್ದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಆಕೆಯನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿದ್ದರೂ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.
ನಾನು ಏನು ಹೇಳುತ್ತೇನೋ ಅದನ್ನು ಮಾತ್ರ ಮಾಡುತ್ತೇನೆ… ಶುರುವಾಯ್ತು ಉಪ್ಪಿ ‘UI’
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + seven =
Remember me
