ದಾವಣಗೆರೆ:ಶಾಲೆಯೊಂದರ ಪ್ರವೇಶ ದ್ವಾರದಲ್ಲೇ ಹೆಜ್ಜೇನು ಗೂಡು ಕಟ್ಟಿದ್ದು, ಶಾಲೆಯ 50ಕ್ಕೂ ಹೆಚ್ಚು ಮಕ್ಕಳನ್ನು ಅಗ್ನಿಶಾಮಕ ದಳದವರು ರಕ್ಷಣೆ ಮಾಡಿದ್ದಾರೆ. ದಾವಣಗೆರೆಯಲ್ಲಿ ಈ ಪ್ರಕರಣ ನಡೆದಿದೆ.
ಇಲ್ಲಿನ ಹರಿಹರ ತಾಲೂಕು ಕೊಂಡಜ್ಜಿಯಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆಯ ಪ್ರವೇಶ ದ್ವಾರದಲ್ಲಿ ಗುರುವಾರ ಸಂಜೆ ಹೆಜ್ಜೇನುಗಳು ಗೂಡು ಕಟ್ಟಿದ್ದರಿಂದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಆತಂಕಕ್ಕೆ ಒಳಗಾದರು. ಈ ಬಗ್ಗೆ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದು, ದಾವಣಗೆರೆಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ 50ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಿದರು.

ಶಾಲೆಗೆ ಒಂದೇ ಪ್ರವೇಶದ್ವಾರವಿದ್ದು ಅಲ್ಲಿಯೇ ಜೇನುಗೂಡು ಕಟ್ಟಿದ್ದರಿಂದ ಹಿಂಭಾಗದ ಕಾಂಪೌಂಡ್‌ಗೆ ಏಣಿ ಹಾಗೂ ರೋಪ್ ಹಾಕಿದ ಅಗ್ನಿಶಾಮಕ ಸಿಬ್ಬಂದಿ ಮಕ್ಕಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದರು ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಸವಪ್ರಭು ಶರ್ಮ ತಿಳಿಸಿದರು.

ಕಾಂತಾರ: 2 ವಾರ ಕಳೆದರೂ ತಗ್ಗದ ಅಬ್ಬರ; ಬಾಲಿವುಡ್ ಚಿತ್ರಗಳೆರಡೂ ತತ್ತರ!
ಯಕ್ಷಗಾನಕ್ಕೆ ಕಾಲಮಿತಿ: ಆ ಬದಲಾವಣೆ ಹೀಗಿದ್ದರೆ ಹೇಗೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + eleven =
Remember me
