ಬೆಂಗಳೂರು: ಕಾಚರಕನಹಳ್ಳಿಯ ಕೆರೆ ಬಳಿಯಿದ್ದ ಕೂಲಿ ಕಾರ್ಮಿಕರ ಗುಡಿಸಲುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳ ಪುಸ್ತಕ, ಬಟ್ಟೆ ಹಾಗೂ ಶಾಲಾ ದಾಖಲೆಗಳು ಸುಟ್ಟು ಹೋಗಿವೆ.
ಇದರಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೂ ಇದ್ದು, ಅವರಿಗೆ ಓದಲು ಪುಸ್ತಕಗಳಿಲ್ಲದಂತಾಗಿವೆ. ಇನ್ನೇನು ಪರೀಕ್ಷೆಯೂ ಬಂತು; ಅವರು ಪರೀಕ್ಷೆಗೆ ಹೇಗೆ ಸಿದ್ಧರಾಗಬೇಕು ಎಂದು ಸಂತ್ರಸ್ತರು ಕಣ್ಣೀರು ಹಾಕಿದ್ದಾರೆ.
ಇದನ್ನೂ ಓದಿಟೀಕಿಸಿದವರಿಗೆ ಮಂಗಳೂರಿನ ಗಗನಸಖಿಯ ಖಡಕ್ ಪ್ರತ್ಯುತ್ತರ
ಒಟ್ಟು ಸುಮಾರು 30 ಗುಡಿಸಲುಗಳು ಸುಟ್ಟು ಭಸ್ಮವಾಗಿವೆ. ಅಲ್ಲದೆ, 50-60 ಶೆಡ್‌ಗಳನ್ನು ದುಷ್ಕರ್ಮಿಗಳು ಕಿತ್ತು ಹಾಕಿದ್ದಾರೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಾರ್ಮಿಕರು ಊರುಗಳಿಗೆ ತೆರಳಿದ್ದ ಸಂದರ್ಭದಲ್ಲಿ ಕೃತ್ಯ ನಡೆದಿದೆ.
ಗುಡಿಸಲುಗಳಿಗೆ ಉದ್ದೇಶ ಪೂರ್ವಕವಾಗಿಯೇ ಬೆಂಕಿ ಇಟ್ಟಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ದೂರು ದಾಖಲಿಸಿ ಆರೋಪಿಗಳ ಬಂಧನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಬಾಣಸವಾಡಿ ಉಪವಿಭಾಗದ ಎಸಿಪಿ ತಿಳಿಸಿದ್ದಾರೆ.ಕೆರೆ ಪ್ರದೇಶದಲ್ಲಿ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ 300ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಶೆಡ್ ಹಾಕಿಕೊಂಡಿದ್ದು, ಕಳೆದ 10 ವರ್ಷಗಳಿಂದ ಇಲ್ಲಿಯೇ ವಾಸವಿದ್ದಾರೆ. ಶೆಡ್‌ಗಳ ಸಮೀಪ ಯಾವುದೇ ಮನೆಗಳಿಲ್ಲ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಕೂಲಿ ಕಾರ್ಮಿಕರೆಲ್ಲ ಊರುಗಳಿಗೆ ಹೋಗಿದ್ದರು. ಈ ನಡುವೆಯೇ ದುಷ್ಕರ್ಮಿಗಳು ಬೆಂಕಿ ಹಾಕಿ, ಕೆಲ ಶೆಡ್‌ಗಳನ್ನು ಕಿತ್ತು ಎಸೆದಿದ್ದಾರೆ.
ರಸ್ತೆ ಸಮೀಪ ವಾಸ: ಊರುಗಳಿಗೆ ತೆರಳಿದ್ದ ಕೂಲಿಕಾರ್ಮಿಕರು ಲಾಕ್‌ಡೌನ್ ನಿಯಮ ಸಡಿಲಿಕೆಯಾದ ಹಿನ್ನೆಲೆಯಲ್ಲಿ ನಗರಕ್ಕೆ ವಾಪಸ್ ಬಂದಿದ್ದಾರೆ. ಈ ವೇಳೆ ಗುಡಿಸಲು ಸಂಪೂರ್ಣವಾಗಿ ಹಾನಿಯಾಗಿರುವುದು ಗೊತ್ತಾಗಿದೆ.ವಾಸಿಸಲು ಗುಡಿಸಲುಗಳಿಲ್ಲದೇ ಬೀದಿಗೆ ಬಿದ್ದಿರುವ ಕುಟುಂಬಗಳು ರಸ್ತೆ ಸಮೀಪವೇ ಅಡುಗೆ ಮಾಡಿಕೊಂಡು, ಅಲ್ಲಿಯೇ ಮಲಗತೊಡಗಿದ್ದಾರೆ. ಕರೊನಾ ಭೀತಿ ನಡುವೆ ತಮ್ಮನ್ನು ಸಂಕಷ್ಟಕ್ಕೆ ದೂಡಿರುವ ದುಷ್ಕರ್ಮಿಗಳಿಗೆ ಕೂಲಿಕಾರ್ಮಿಕರು ಹಿಡಿಶಾಪ ಹಾಕುತ್ತಿದ್ದಾರೆ.
ಕೋಡೆಡ್ ಮೆಸೇಜ್ ಹೊತ್ತ ಪಾಕ್‌ನ ಗೂಢಚಾರಿ ಪಾರಿವಾಳ ವಶ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − ten =
Remember me
