ಬೆಂಗಳೂರು:ದೀಪಾವಳಿ ಹಬ್ಬದ ಹಿನ್ನೆಲೆ ಜೆ.ಪಿ.ನಗರದಲ್ಲಿ ಪಟಾಕಿ ಸಿಡಿಸುವಾಗ ರಾಕೆಟ್​ ಸ್ಫೋಟಗೊಂಡು 10 ವರ್ಷದ ಬಾಲಕನೊಬ್ಬನ ಮುಖ ಸಂಪೂರ್ಣ ಸುಟ್ಟು ಹೋಗಿದೆ. ಕಣ್ಣಿಗೂ ಹಾನಿಯಾಗಿದೆ. ಇದೇ ರೀತಿ ಬೆಂಗಳೂರಿನ ವಿವಿಧೆಡೆ ಅವಘಡ ಸಂಭವಿಸಿದೆ, ಯಾರೋ ಹಚ್ಚಿದ ಪಟಾಕಿಗೆ ಬೇರೆಯವರೂ ಗಾಯಗೊಂಡಿದ್ದಾರೆ.
ದೀಪಾವಳಿ ಹಬ್ಬದ ಸಂಭ್ರಮದಲ್ಲಿ ನಗರದಲ್ಲಿ ಸಿಡಿಸಿದ ಪಟಾಕಿಯಿಂದ ಈವರೆಗೂ ಮಕ್ಕಳು ಸೇರಿ 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಕಣ್ಣಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಸೋಮವಾರ ನರಕಚತುದರ್ಶಿ ದಿನದಂದು ಪಟಾಕಿ ಹಚ್ಚುವ ವೇಳೆ ಉಂಟಾದ ಅವಘಡದಲ್ಲಿ ಮಿಂಟೋ ಕಣ್ಣಿನ ಆಸ್ಪತ್ರೆ ಹಾಗೂ ನಾರಾಯಣ ನೇತ್ರಾಲಯದಲ್ಲಿ ತಲಾ ಇಬ್ಬರಂತೆ ನಾಲ್ವರು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಇನ್ನು ಹಬ್ಬಕ್ಕೂ ಮುನ್ನಾದಿನ ಭಾನುವಾರ ಮೂವರು ಗಾಯಗೊಂಡಿದ್ದರು. ಇವರಲ್ಲಿ ಇಬ್ಬರು ಮಿಂಟೋದಲ್ಲಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ.
ಜೆ.ಪಿ.ನಗರದ 10 ವರ್ಷದ ಬಾಲಕನ ಮುಖ ಸಂಪೂರ್ಣ ಸುಟ್ಟುಹೋಗಿದ್ದು, ಕಣ್ಣಿಗೂ ಹಾನಿಯಾಗಿದೆ. ಬಾಲಕನಿಗೆ ವಿಕ್ಟೋರಿಯಾದ ಸುಟ್ಟಗಾಯಗಳ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಆಂಧ್ರಪ್ರದೇಶದ ಅನಂತಪುರ ಮೂಲದ 20 ವರ್ಷದ ಯುವಕ ದಾರಿಯಲ್ಲಿ ಹೋಗುತ್ತಿರುವ ವೇಳೆ ಯಾರೋ ಸಿಡಿಸಿದ ಪಟಾಕಿಯಿಂದ ಹೊರಹೊಮ್ಮಿದ ಬೆಂಕಿಯ ಕಿಡಿ ಕಣ್ಣಿಗೆ ತಾಗಿ ಗಂಭೀರವಾಗಿ ಹಾನಿಯಾಗಿದೆ. ನಾರಾಯಣ ನೇತ್ರಾಲಯದಲ್ಲಿ ದಾಖಲಾಗಿದ್ದು, ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಫ್ರೇರೇಜರ್​ಟೌನ್​ನಲ್ಲಿ 7 ವರ್ಷದ ಬಾಲಕ ಆಟಂಬಾಂಬ್​ ಸಿಡಿಸುವ ವೇಳೆ ಅದರ ಕಿಡಿ ಕಣ್ಣಿಗೆ ಹಾರಿದೆ. ಶ್ರೀನಗರದ 18 ವರ್ಷದ ಯುವಕ ನೆರೆಯವರು ಹಚ್ಚುತ್ತಿದ್ದ ಪಟಾಕಿ ನೋಡುತ್ತಿದ್ದ ವೇಳೆ ಕಿಡಿ ಕಣ್ಣಿಗೆ ಹಾರಿ ಗಾಯಗೊಂಡು ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾನೆ.
ದೀಪಾವಳಿ ಹಬ್ಬದ ದಿನವೇ ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು

ಹರ್ಷನ ಮನೆ ಬಳಿ ತಡರಾತ್ರಿ ಮಾರಕಾಸ್ತ್ರ ಹಿಡಿದು ಬೆದರಿಕೆ ಹಾಕಿದ ದುಷ್ಕರ್ಮಿಗಳು! ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
