ಆನೇಕಲ್​:ಈ ವರ್ಷ ದೀಪಾವಳಿಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಅತ್ತಿಬೆಲೆಯಲ್ಲಿ ಪಟಾಕಿ ಖರೀದಿಸಲು ಗ್ರಾಹಕರು ಮುಗಿಬಿದ್ದಿದ್ದಾರೆ.
ಪಟಾಕಿಯಿಂದ ಕರೊನಾ ರೋಗಿಗಳಿಗೆ ತೊಂದರೆಯಾಗುತ್ತದೆ, ಸೋಂಕಿನ ಪ್ರಮಾಣ ಅಧಿಕವಾಗುತ್ತದೆ. ಜನರ ಜೀವ ಉಳಿಸುವ ಮತ್ತು ಆರೋಗ್ಯ ದೃಷ್ಟಿಯಿಂದ ರಾಜ್ಯದಲ್ಲಿ ಪಟಾಕಿ ನಿಷೇಧಿಸಿ ಶುಕ್ರವಾರ ಬೆಳಗ್ಗೆ ಸಿಎಂ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ದೀಪಾವಳಿಗೆ ಯಾರಾದರೂ ಪಟಾಕಿ ಸಿಡಿಸಿದರೆ ಅಂತಹವರ ವಿರುದ್ಧ ಸೂಕ್ತ ಕ್ರಮದ ಜತೆಗೆ ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ವಸೂಲಿ ಮಾಡಲು ನಿರ್ಧರಿಸುವುದಾಗಿಯೂ ಸಚಿವ ಡಾ.ಕೆ.ಸುಧಾಕರ್​ ಎಚ್ಚರಿಸಿದ್ದಾರೆ. ಪಟಾಕಿ ಬ್ಯಾನ್​ ಆಗಿದೆ ಎಂಬ ಸುದ್ದಿ ಹರಡುತ್ತಿದ್ದಂತೆ ನೂರಾರು ಜನರು ಏಕಾಏಕಿ ಪಟಾಕಿ ಅಂಗಡಿಗಳಿಗೆ ಬಂದು ಪಟಾಕಿ ಖರೀದಿಸುವಲ್ಲಿ ಮಗ್ನರಾಗಿದ್ದ ದೃಶ್ಯ ಶುಕ್ರವಾರ ಮಧ್ಯಾಹ್ನದ ನಂತರ ಕಂಡುಬಂತು.
ತಮಿಳುನಾಡು ಗಡಿಭಾಗದ ಅತ್ತಿಬೆಲೆಯಲ್ಲಿ 150ಕ್ಕೂ ಹೆಚ್ಚು ಪಟಾಕಿ ಅಂಗಡಿಗಳಿದ್ದು, ಅಂದಾಜು 20 ಕೋಟಿ ರೂ. ಮೌಲ್ಯದ ಪಟಾಕಿ ದಾಸ್ತಾನು ಇದೆ ಎನ್ನಲಾಗಿದೆ. ಪಟಾಕಿ ಬ್ಯಾನ್​ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸುತ್ತಿದ್ದಂತೆ ಅಂಗಡಿಗಳ ಮಾಲೀಕರು ನಷ್ಟದ ಭೀತಿಯಲ್ಲಿದ್ದಾರೆ. ಪಟಾಕಿ ಸಿಡಿಸಿದರೆ ದಂಡ ಹಾಕುವ ಬಗ್ಗೆ ಚರ್ಚೆಯಾಗುತ್ತಿದೆ. ಆದರೂ ಕ್ಯಾರೆ ಎನ್ನದ ಹಲವರು ಗ್ರಾಹಕರು ನಾ ಮುಂದು-ತಾ ಮುಂದು ಎಂಬಂತೆ ಪಟಾಕಿ ತುಂಬಿದ್ದ ಬಾಕ್ಸ್​ಗಳನ್ನು ಖರೀದಿಸಿಕೊಂಡು ಕಾರಿನಲ್ಲಿ ಇಟ್ಟುಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂತು.
ಜನರ ಜೀವ ಉಳಿಸುವ ಮತ್ತು ಆರೋಗ್ಯ ದೃಷ್ಟಿಯಿಂದ ಈಗಾಗಲೇ ದೆಹಲಿ, ಪಶ್ಚಿಮಬಂಗಾಳ ರಾಜ್ಯಗಳು ದೀಪಾವಳಿಗೆ ಪಟಾಕಿಯನ್ನು ನಿಷೇಧಿಸಿವೆ. ಇದೀಗ ರಾಜ್ಯ ಸರ್ಕಾರವೂ ಅದೇ ನಿರ್ಧಾರ ಕೈಗೊಂಡಿದೆ.
ದೀಪಾವಳಿಗೆ ಪಟಾಕಿ ನಿಷೇಧ…; ಆದೇಶ ಹೊರಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಗಂಡನ ಆಟೋದಲ್ಲಿ ಸುತ್ತುತ್ತಾಳೆ, ಕ್ಷಣಾರ್ಧದಲ್ಲಿ ಲಕ್ಷ-ಲಕ್ಷ ಹಣ ತರ್ತಾಳೆ! ಬೆಚ್ಚಿಬೀಳಿಸುತ್ತೆ ಈ ದಂಪತಿಯ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
