ಬೆಂಗಳೂರು: ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೆಲವು ಜಿಲ್ಲೆಗಳ ಶಾಸಕರುಗಳ ಜತೆ ಆಯಾ ಕ್ಷೇತ್ರಗಳ ವಿಚಾರವಾಗಿ ಚರ್ಚೆ ಮಾಡಿದ್ದು, ರಾಜಕೀಯವಾಗಿ ಮಾರ್ಗದರ್ಶನ ನೀಡಿದ್ದೇವೆ. ಅವರ ಅಹವಾಲುಗಳನ್ನು ಆಲಿಸಿದ್ದೇವೆ. ಇದರ ಜತೆಗೆ ನಮ್ಮ ಸರ್ಕಾರದ ಕಾರ್ಯಕ್ರಮಗಳ ಜಾರಿ ಹಾಗೂ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಸತತವಾಗಿ ಒಂದು ವಾರಗಳ ಕಾಲ ಈ ರೀತಿ ಚರ್ಚೆ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಂಗಳೂರಿನ ಕೆಲವು ವಾರ್ಡ್‌ಗಳಲ್ಲಿ ಕಾಮಗಾರಿ ಮಾಡಿದ ಗುತ್ತಿಗೆದಾರರು ನನ್ನನ್ನು ಭೇಟಿ ಮಾಡಿದ್ದರು. ಬಿಜೆಪಿ ಶಾಸಕರ ಕ್ಷೇತ್ರದಲ್ಲಿ ಸಾವಿರ ಕೋಟಿ ಬಾಕಿ ಇದ್ದರೆ, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಲ್ಲಿ 170 ಕೋಟಿ ಮಾತ್ರ ಬಾಕಿ ಇದೆ. ಇದೆಲ್ಲವೂ ಸತ್ಯ ಅಲ್ಲವೇ? ಮೊದಲು ನಮ್ಮ ಪಕ್ಷದ ಶಾಸಕರ ಅಹವಾಲು ಆಲಿಸುತ್ತೇವೆ ಎಂದು ತಿಳಿಸಿದರು.ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಅನಗತ್ಯ ಸರ್ಕಾರ ನಮ್ಮ ಶಾಸಕರ ಜತೆಗೂ ಸಭೆ ಮಾಡಬಹುದಾಗಿತ್ತು ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, ನಾವು ಅವರ ಪಕ್ಷದ ಶಾಸಕರ ಜತೆಗೂ ಸಭೆ ಮಾಡುತ್ತೇವೆ. ಅವರ ಜತೆ ಸಭೆ ಮಾಡುವುದಿಲ್ಲ ಎಂದು ಯಾರು ಹೇಳಿದರು? ಶಾಸಕಾಂಗ ಪಕ್ಷದ ಸಭೆಯಲ್ಲಿ ನಮ್ಮ ಶಾಸಕರಿಗೆ ಕೊಟ್ಟ ಮಾತಿನಂತೆ ಸಭೆ ಮಾಡುತ್ತಿದ್ದೇವೆ. ಎಲ್ಲರನ್ನು ಒಟ್ಟಿಗೆ ಕರೆದು ಜಗಳಕ್ಕೆ ಬಿಡಲು ಸಾಧ್ಯವೇ? ಎಂದು ಪ್ರಶ್ನಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:18 − ten =
Remember me
