ಬೆಳಗಾವಿ:ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಬೆಳಗಾವಿ ಜಿಲ್ಲೆಯೊಂದರಲ್ಲೇ ಐದು ಸೇತುವೆಗಳು ಮುಳುಗಡೆಯಾಗಿದ್ದು ಒಂದೆಡೆಯಾದರೆ, ಮತ್ತೊಂದೆಡೆ ನೀರಾವರಿ ಇಲಾಖೆಯ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಐದು ಸೇತುವೆಗಳು ಜಲಾವೃತವಾಗಿದೆ. ಭಾರಿ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಸುಣಧೋಳಿ, ಕಮಲದಿನ್ನಿ, ಪಿವೈ ಹುಣಶ್ಯಾಳ, ಅವರಾದಿ, ಢವಳೇಶ್ವರ ಸೇತುವೆಗಳು ಜಲಾವೃತಗೊಂಡಿವೆ.
ಸೇತುವೆಗಳು ಮುಳುಗಿದ್ದರಿಂದ ಸಾರ್ವಜನಿಕರು ಸಂಚಾರಕ್ಕೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯರು ಪಕ್ಕದ ಊರಿಗೂ ಸುತ್ತಿಬಳಸಿ ಹೋಗುವ ಅನಿವಾರ್ಯತೆ ಉಂಟಾಗಿದೆ. ಹಾಗಂತ ಈ ಸೇತುವೆಗಳ ಮುಳುಗಡೆಗೆ ಬರೀ ಮಳೆ ಮಾತ್ರ ಕಾರಣವಲ್ಲ.
ಭಾರಿ ಮಳೆ ಹಿನ್ನೆಲೆಯಲ್ಲಿ ನೀರು ತುಂಬಿದ್ದರೂ ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ರಿಡ್ಜ್ ಕಮ್ ಬ್ಯಾರೇಜ್ ಗೇಟ್​ಗಳನ್ನು ನೀರಾವರಿ ಇಲಾಖೆಯ ಅಧಿಕಾರಿಗಳು ತೆರೆಯದೇ ಇರುವುದರಿಂದ ಈ ಪರಿಸ್ಥಿತಿ ಉಂಟಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಹಿಡಿಶಾಪ ಹಾಕುತ್ತಿದ್ದಾರೆ.
ಕೆನಡಾದಲ್ಲಿ ಕನ್ನಡ ಮಾತು: ಚಂದ್ರ ಆರ್ಯರಿಗೆ ಭಾರಿ ಬೆಂಬಲ; ಹಿಂಬಾಲಕರ ಸಂಖ್ಯೆಯಲ್ಲಿ ಹೆಚ್ಚಳ…

ಕಟ್ಟುಮಸ್ತಾದ ಯುವಕ ಸಾವಿಗೆ ಶರಣು; ಮನೆಯಲ್ಲೇ ಆತ್ಮಹತ್ಯೆ, ಕಾರಣ ನಿಗೂಢ..

50 ಪ್ರಯಾಣಿಕರಿದ್ದ ಬಸ್​ ಮೇಲೆಯೇ ಬಿತ್ತು ವಿದ್ಯುತ್​ ತಂತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
