ಉತ್ತರಕನ್ನಡ:ಈಜಲು ಬಾರದೆ ಹೊಳೆಗಿಳಿದ ಒಂದೇ ಕುಟುಂಬದ ಐವರು ದುರಂತ ಅಂತ್ಯ ಕಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಸಹಸ್ರಲಿಂಗ ಬಳಿಯ ಭೂತಗುಂಡಿಯಲ್ಲಿ ನಡೆದಿದೆ.
ಮೃತರನ್ನು ಉತ್ತರಕನ್ನಡ ಜಿಲ್ಲೆ ಶಿರಸಿ ನಗರದ ರಾಮನಬೈಲಿನ ನಿವಾಸಿಗಳಾದ ಮೌಲಾನ ಮಹಮ್ಮದ್ ಸಲೀಮ್ ಕಲೀಲ್ ರೆಹಮಾನ್ (44), ನಬಿಲ್ ನೂರ್ ಅಹ್ಮದ್‌(22), ಮಿಸ್ಬಾ ತಬಸುಮ್(21), ನಾದಿಯಾ ನೂರ್ (20), ಉಮರ್ ಸಿದ್ದಿಕ್(14) ಎಂದು ಗುರತಿಸಲಾಗಿದೆ.
ಇದನ್ನೂ ಓದಿ:ತಾವು ಓದಿದ ಶಾಲೆಯನ್ನೇ ದತ್ತು ಪಡೆದ ನಟ ರಿಷಭ್​ ಶೆಟ್ಟಿ; ಮೆಚ್ಚುಗೆಯ ಮಹಾಪೂರ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಭಾನುವಾರ ರಜೆ ಇದ್ದ ಕಾರಣ ಒಂದೇ ಕುಟುಂಬದ 20 ಸದಸ್ಯರು ಶಾಲ್ಮಲಾ ನದಿ ಪಾತ್ರದ ಭೂತನಗುಂಡಿ ಎಂಬ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ನಾದಿಯಾ ಶೇಖ್ ಹಾಗೂ ನಾಬಿಲ್ ಎಂಬುವವರು ಆಕಸ್ಮಿಕವಾಗಿ ನೀರಲ್ಲಿ ಬಿದ್ದ ಸಂದರ್ಭದಲ್ಲಿ ಅವರನ್ನು ಉಳಿಸಲು ಸಮೀಪವಿದ್ದ ಸಲೀಂ, ಉಮರ್ ಹಾಗೂ ಮಿಸಬಾ ನೀರಿಗೆ ಇಳಿದಿದ್ದಾರೆ.
ನೀರಿಗೆ ಇಳಿದ ಐದು ಮಂದಿಗೆ ಈಜು ಬರುತ್ತಿರಲಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ನೀರಿನ್ಲಲಿ ಮುಳುಗಿ ಮೃತಪಟ್ಟಿರುವ ಐವರು ಗುಂಡಿಯ ಆಳದಲ್ಲಿ ಸಿಲುಕಿರಬಹುದು ಎಂದು ಕುಟುಂಬಸ್ಥರು ಶಂಕಿಸಿದ್ಧಾರೆ. ಓರ್ವನ ಮೃತ ದೇಹ ಪತ್ತೆಯಾಗಿದ್ದು, ನಾಲ್ವರ ಮೃತ ದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿಗಳು ಭರದಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:6 − 4 =
Remember me
