ಬೆಂಗಳೂರು:ರಾಜ್ಯದ ಅಲ್ಲಲ್ಲಿ ನಿರಂತರ ಮಳೆಯಾಗುತ್ತಿದ್ದು, ಮುಂದಿನ 5 ದಿನವೂ ಮುಂದುವರಿಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಭಾನುವಾರ ಚದುರಿದಂತೆ ಸಾಮಾನ್ಯ ಮಳೆಯಾಗಿದ್ದರೆ, ಉಡುಪಿ ಜಿಲ್ಲೆಯಲ್ಲಿ ಸಾಮಾನ್ಯ ಪ್ರಮಾಣದಲ್ಲಿ ಮಳೆ ಸುರಿದಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜು.27ರಂದು ಯೆಲ್ಲೋ ಅಲರ್ಟ್ ಇದ್ದರೆ, ಜು.30, 31ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ದಿನಗಳು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಇದ್ದರೆ, ಜು.30ರಂದು ಬೆಳಗಾವಿ, ಬೀದರ್, ಗದಗ ಹಾಗೂ ಕಲಬುರಗಿಯಲ್ಲಿ ಯೆಲ್ಲೋ ಅಲರ್ಟ್ ಇರಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡುಗು ಹಾಗೂ ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗುವ ಹಿನ್ನೆಲೆಯಲ್ಲಿ ಜು.29ರಿಂದ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರದಲ್ಲಿ ಜು.29ರಂದು ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ ಮಾಹಿತಿ ನೀಡಿದರು.
ಧರೆಗುರುಳಿದ ಹಂಪಿ ಸ್ಮಾರಕದ ಕಂಬಗಳು:ಎರಡು ದಿನದಿಂದ ಸತತ ಸುರಿಯುತ್ತಿರುವ ಮಳೆಗೆ ಹಂಪಿ ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನ ಹಿಂಭಾಗದ ಲೋಕಪಾವನ ಪುಷ್ಕರಣಿ ದಡದಲ್ಲಿರುವ ಶಿವ-ದುಗಾ ದೇವಸ್ಥಾನದ ನಾಲ್ಕು ಕಂಬಗಳು ಶನಿವಾರ ರಾತ್ರಿ ನೆಲಕ್ಕುರಳಿವೆ. ಅದರಲ್ಲಿ ಕಂಬವೊಂದು ತುಂಡಾಗಿದೆ.
ಕರೊನಾ ಲಸಿಕೆಯಿಂದ ಡಿಎನ್​ಎ ಬದಲಾವಣೆ; 7 ಲಕ್ಷ ಜನರಿಗೆ ಅಡ್ಡ ಪರಿಣಾಮ; ಇಲ್ಲಿದೆ ಫ್ಯಾಕ್ಟ್​ ಚೆಕ್​….!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
