ನವದೆಹಲಿ:ಕೇಂದ್ರ ಸರ್ಕಾರ ಪ್ರಕಟಿಸಿರುವ ಪದ್ಮಪ್ರಶಸ್ತಿಗಳ ಪೈಕಿ ಕರ್ನಾಟಕಕ್ಕೆ ಐದು ಪದ್ಮಶ್ರೀ ಪ್ರಶಸ್ತಿಗಳು ಒಲಿದು ಬಂದಿವೆ. ಕೆಲವು ತಿಂಗಳ ಹಿಂದಷ್ಟೇ ಅಗಲಿದ ಕವಿ ಸಾಹಿತಿ ಸಿದ್ದಲಿಂಗಯ್ಯ ಅವರನ್ನು ಮರಣೋತ್ತರ ಪದ್ಮಶ್ರೀ ಪ್ರಶಸ್ತಿಗೆ ಪರಿಗಣಿಸಲಾಗಿದೆ.
ಇನ್ನು ಗುಡ್ಡಕ್ಕೆ ಸುರಂಗ ಕೊರೆದ ಕೃಷಿ ಸಾಹಸಿ, ದಕ್ಷಿಣಕನ್ನಡ ಜಿಲ್ಲೆಯ ಅಡ್ಯನಡ್ಕದ ಅಮೈ ಮಹಾಲಿಂಗ ನಾಯ್ಕ ಅವರೂ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಇವರು ಕೃಷಿಗಾಗಿ ಏಕಾಂಗಿಯಾಗಿ ಏಳು ಸುರಂಗ ಕೊರೆದು ನೀರು ಪಡೆದ ಭಗೀರಥ. ಕೆರೆಯಲ್ಲಿ ನೀರು‌ ಸಂಗ್ರಹಿಸಿ‌ ಗುರುತ್ವ ಬಲದ ಮೂಲಕ ತುಂತುರು ನೀರಾವರಿಯಾಗಿ ಹರಿಸಿ ಯಶಸ್ವಿಯಾಗಿದ್ದರು. ಇವರ ಸಾಧನೆ ಕುರಿತು ವಿಜಯವಾಣಿ ವಿಶೇಷ ವರದಿ ಪ್ರಕಟಿಸಿದ್ದು, ದಿಗ್ವಿಜಯ ಸುದ್ದಿವಾಹಿನಿ ವಿಶೇಷ ವರದಿ ಪ್ರಸಾರ ಮಾಡಿತ್ತು.
ಪದ್ಮಶ್ರೀಗೆ ಆಯ್ಕೆ ಆಗಿರುವ ಮತ್ತೊಬ್ಬ ಕನ್ನಡಿಗ ಧಾರವಾಡದ ಅಣ್ಣಿಗೇರಿಯ ಅಬ್ದುಲ್ ಖಾದರ್ ನಡಕಟ್ಟಿನ್. ಇವರು ಬಿತ್ತನೆ ಕೂರಿಗೆ ಸಂಶೋಧನೆ ಮಾಡಿ ತಾವೇ ಮಾರುಕಟ್ಟೆಗೆ ಪರಿಚಯಿಸಿದ್ದರು. ಕೂರಿಗೆ ಜತೆಗೆ ಇನ್ನೂ ವಿವಿಧ ಕೃಷಿ ಸಲಕರಣೆಗಳನ್ನು ಇವರು ಆವಿಷ್ಕಾರ ಮಾಡಿದ್ದರು. ಕಲಾವಿದ ಎಚ್.ಆರ್.ಕೇಶವಮೂರ್ತಿ, ವಿಜ್ಞಾನ-ತಂತ್ರಜ್ಞಾನ ವಿಭಾಗದಲ್ಲಿ ಸುಬ್ಬಣ್ಣ ಅಯ್ಯಪ್ಪನ್ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.
ರಾವತ್​ಗೆ ಮರಣೋತ್ತರ ಪದ್ಮವಿಭೂಷಣ: 4 ಪದ್ಮವಿಭೂಷಣ, 17 ಪದ್ಮಭೂಷಣ, 107 ಪದ್ಮಶ್ರೀ ಪ್ರಶಸ್ತಿ ಪಟ್ಟಿ ಪ್ರಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
