ಬೆಂಗಳೂರು:ಸಾರ್ವಜನಿಕರನ್ನು ದರೋಡೆ ಮಾಡಲು ಹೊಂಚು ಹಾಕಿ ಕುಳಿತಿದ್ದ ಐವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಈ ಐವರು ಆರೋಪಿಗಳು ಕುಖ್ಯಾತ ರೌಡಿ ಶೀಟರ್ ಮಹೇಶ್ ಅಲಿಯಾಸ್ ಸಿದ್ದಾಪುರ ಮಹೇಶ್‌ನ ಸಹಚರರಾಗಿದ್ದು, ಬಂಧಿತರಿಂದ ಫಾರ್ಚೂನರ್ ಕಾರು ಹಾಗೂ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ. ಶನಿವಾರ ಶಾಂತಿನಗರದ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ ಪಕ್ಕದ ಬಿಟಿಎಸ್ ಸರ್ವಿಸ್ ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಸಾರ್ವಜನಿಕರ ಸುಲಿಗೆ ಮಾಡಲು ಹೊಂಚು ಹಾಕಿ ಕುಳಿತ್ತಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಲ್ಸನ್ ಗಾರ್ಡನ್ ನಾಗನಿಗೆ ಸ್ಕೆಚ್:ಆರೋಪಿಗಳು ಕಳೆದ ವರ್ಷ ಬನಶಂಕರಿ ಮೆಟ್ರೋ ರೈಲು ನಿಲ್ದಾಣದ ಬಳಿ ರೌಡಿ ಶೀಟರ್ ಮದನ್ ಅಲಿಯಾಸ್ ಪಿಟೀಲ್ ಎಂಬಾತನನ್ನು ಕೊಲೆ ಮಾಡಿದ್ದ ರೌಡಿ ಶೀಟರ್ ಸಿದ್ದಾಪುರ ಮಹೇಶ್‌ನ ಸಹಚರರಾಗಿದ್ದಾರೆ.
ಆರೋಪಿಗಳು ಸಾರ್ವಜನಿಕರ ಸುಲಿಗೆ ಜತೆಗೆ ಸಿದ್ದಾಪುರ ಮಹೇಶನ್ ಎದುರಾಳಿ ತಂಡದ ವಿಲ್ಸನ್ ಗಾರ್ಡನ್ ನಾಗ ಅಥವಾ ಆತನ ಸಹಚರರು ಸಿಕ್ಕರೆ ಅವರ ಮೇಲೆ ದಾಳಿ ಮಾಡುವ ಉದ್ದೇಶ ಹೊಂದಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಈ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 14 =
Remember me
