ಬೀದರ್:ಟ್ರಕ್​ ಹಾಗೂ ಆಟೋ ಮುಖಾಮುಖಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವಿಗೀಡಾಗಿದ್ದಾರೆ. ಅದರಲ್ಲೂ ಮೃತಪಟ್ಟ ಐವರೂ ಮಹಿಳೆಯರು. ಇಂಥದ್ದೊಂದು ಭೀಕರ ಅಪಘಾತ ಬೀದರ್ ಜಿಲ್ಲೆಯಲ್ಲಿ ಸಂಭವಿಸಿದೆ.
ಐಷರ್ ಟ್ರಕ್ ಹಾಗೂ ಆಟೋರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪ್ರಕರಣದಲ್ಲಿ ಮಹಿಳೆಯೊಬ್ಬಳು ಸ್ಥಳದಲ್ಲೇ ಸಾವಿಗೀಡಾದರೆ, ಇನ್ನು ನಾಲ್ವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರಭಾವತಿ (36), ಯಾದಮ್ಮ (40), ಗುಂಡಮ್ಮ (52), ಜಕ್ಕಮ್ಮ (32), ರುಕ್ಮಿಣಿ (60) ಸಾವೀಗೀಡಾದ ದುರ್ದೈವಿಗಳು. ಇನ್ನು ಆರು ಮಂದಿಗೆ ಗಾಯಗಳಾಗಿದ್ದು, ಅವರನ್ನು ಬೀದರ್ ಹಾಗೂ ಮನ್ನಾಖೇಳ್ಳಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೀದರ್ ಜಿಲ್ಲೆ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಮೃತಪಟ್ಟ ಐವರು ಮಹಿಳೆಯರು ಹಾಗೂ 6 ಮಂದಿ ಗಾಯಾಳುಗಳು ಉಡಮನಳ್ಳಿ ಗ್ರಾಮಸ್ಥರು. ಬೆಮಳಖೇಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಉಂಟಾಗಿದೆ.
ಶಿಕ್ಷಕರ ಏಟಿಗೆ ಬಲಿಯಾದಳು ನಾಲ್ಕನೇ ತರಗತಿಯ ವಿದ್ಯಾರ್ಥಿನಿ!

ಚಂದ್ರು ಮತ್ತೆ ಬರಲ್ಲ, ಆದ್ರೆ ಸತ್ಯಾಂಶ ಹೊರಬರುತ್ತೆ: ಶಾಸಕ ರೇಣುಕಾಚಾರ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − nineteen =
Remember me
