ಕಲಬುರಗಿ:ಸೊನ್ನ ಬ್ಯಾರೇಜ್ ಹಾಗೂ ನದಿ ಪಾತ್ರದಿಂದ ಭೀಮಾ ನದಿಗೆ 8.20 ಲಕ್ಷ ಕ್ಯೂಸೆಕ್ ನೀರು ಹರಿಬಿಟ್ಟಿರುವ ಪರಿಣಾಮ ಕಲಬುರಗಿ ಜಿಲ್ಲೆಯ 126 ಹಳ್ಳಿಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಆಘಾತದ ನಡುವೆಯೇ ಕಲಬುರಗಿಯಲ್ಲಿ ಭಾನುವಾರ ಭಾರಿ ಮಳೆಯಾಗಿದೆ. ಅ. 20ರಿಂದ ಮತ್ತೆ 4 ದಿನ ವರುಣನ ಆರ್ಭಟ ಮುಂದುವರಿಯುವ ಮುನ್ಸೂಚನೆ ಸಿಕ್ಕಿರುವುದು ಆತಂಕ ಹೆಚ್ಚಿಸಿದೆ. ಅಫಜಲಪುರ ಸುತ್ತ 80ಕ್ಕೂ ಹೆಚ್ಚು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ಈ ಮಧ್ಯೆ ಸೇನಾಪಡೆ ಇತರ ತಂಡದವರು ಉಡಚಣದಲ್ಲಿ ಕಾರ್ಯಾಚರಣೆ ನಡೆಸಿ 650ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಿದ್ದಾರೆ. ಭಾನುವಾರ ಸಂಜೆಯಿಂದ ಮಹಾರಾಷ್ಟ್ರದ ಉಜನಿ ಮತ್ತು ವೀರಭಟ್ಕಳ ಜಲಾಶಯಗಳಿಂದ ಬರುವ ನೀರು ಕಡಿಮೆಯಾಗಿದೆ. ಹೀಗಾಗಿ ಸೋಮವಾರ ಪ್ರವಾಹ ಇಳಿಮುಖಗೊಳ್ಳುವ ಸಾಧ್ಯತೆ ಇದೆ. ಪ್ರವಾಹದಿಂದ ಜನರನ್ನು ರಕ್ಷಿಸಲು ಕಲಬುರಗಿ ಜಿಲ್ಲಾಡಳಿತ ತುರ್ತು ಸೇವೆಗೆ ಎರಡು ಹೆಲಿಕಾಪ್ಟರ್​ಗಳನ್ನು ಕಾದಿರಿಸಿದೆ. ಅಫಜಲಪುರ ಕ್ಷೇತ್ರದಲ್ಲಿ 64 , ಕಲಬುರಗಿ 12, ಜೇವರ್ಗಿ 28, ಚಿತ್ತಾಪುರ ಮತ್ತು ಶಹಾಬಾದ್ ತಾಲೂಕಿನ 22 ಹಳ್ಳಿಗಳು ಜಲಾವೃತವಾಗಿವೆ.
ಸಿಎಂ ಬಿ.ಎಸ್. ಯಡಿಯೂರಪ್ಪ ಅ.21ರಂದು ಭೀಕರ ಪ್ರವಾಹದಿಂದ ತತ್ತರಿಸಿರುವ ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಹಾನಿ ಪರಿಶೀಲಿಸಲಿದ್ದಾರೆ. ಸಂತ್ರಸ್ತರನ್ನು ಕೇಳುವವರೇ ಇಲ್ಲದಂತಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗಳಿಗೆ ಭೇಟಿ ನೀಡುತ್ತಿಲ್ಲ ಎಂದು ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದವು. ವಿಧಾನಪರಿಷತ್ ಸದಸ್ಯ ಬಿ.ಜಿ. ಪಾಟೀಲ್ ಸಹ ನೆರೆ ಸಮೀಕ್ಷೆ ಕೈಗೊಳ್ಳುವಂತೆ ಸಿಎಂಗೆ ಮನವಿ ಮಾಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
