ಬೆಂಗಳೂರು:ರಾಜ್ಯದಲ್ಲಿಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ಇದನ್ನೂ ಓದಿ:ವಯನಾಡಿನಲ್ಲಿ ಗುಡ್ಡ ಕುಸಿತ: ಬಂಡೆ ಹಿಡಿದು ವ್ಯಕ್ತಿಯ ಜೀವನ್ಮರಣ ಹೋರಾಟ
ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯದ ಒಳಗೆ ಮತ್ತು ನೆರೆಯ ರಾಜ್ಯಗಳಲ್ಲಿಯೂ ಅತಿಯಾದ ಮಳೆ ಸುರಿಯುತ್ತಿದ್ದು, ರಾಜ್ಯದ ಯಾವುದೇ ಮೂಲೆಯಲ್ಲಿ ಸಮಸ್ಯೆ ತಲೆದೋರಿದರೂ ಅದನ್ನು ಎದುರಿಸಲು ಸಕಲ ತಯಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದ್ದೇನೆ.
ರಾಜ್ಯದಲ್ಲಿಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪ್ರಾಕೃತಿಕ…
— CM of Karnataka (@CMofKarnataka)July 30, 2024

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು ವರದಿಯಾಗುತ್ತಿದ್ದು, ಈ ಕುರಿತು ಸಹ ಜಿಲ್ಲಾಧಿಕಾರಿಗಳು ಎಚ್ಚರ ವಹಿಸುವಂತೆ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಸಹ ಪ್ರವಾಹ ಪರಿಸ್ಥಿತಿಯ ನಿರ್ವಹಣೆಯ ಮೇಲ್ವಿಚಾರಣೆ ನಡೆಸುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ.
ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಸಮರೋಪಾದಿಯಲ್ಲಿ ನಿರ್ವಹಿಸುವಂತೆ, ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗಳನ್ನು ಕೈಗೊಳ್ಳುವಂತೆ ಹಾಗೂ ಪ್ರವಾಹ ಪೀಡಿತರಿಗೆ ಅಗತ್ಯಕ್ಕನುಸಾರವಾಗಿ ಕಾಳಜಿ ಕೇಂದ್ರಗಳನ್ನು ತೆರೆದು ಎಲ್ಲ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಿದ್ದಾರೆ.ಎಲ್ಲಾ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿ ತೆರೆದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಲಭ್ಯರಿದ್ದು ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ.
ಇಬ್ಬರು ಐಎಎಸ್‌ ಅಧಿಕಾರಿ ನಿಯೋಜನೆ: ಭೂ ಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದು ಇದಕ್ಕಾಗಿ ಇಬ್ಬರು ಐಎಎಸ್​ ಅಧಿಕಾರಿಗಳನ್ನು ನಿಯೋಜಿಸಿದ್ದಾರೆ.
ಅರವಿಂದ್‌ ಕೇಜ್ರಿವಾಲ್‌ರನ್ನು ಜೈಲಿನಲ್ಲೇ ಮುಗಿಸಲು ಮೋದಿ ಸರ್ಕಾರ ಸಂಚು: ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
