ಕರೊನಾಘಾತದಿಂದ ಹೈರಾಣಾಗಿರುವ ಕರ್ನಾಟಕವನ್ನು ಈಗ ಪ್ರವಾಹ ಕಾಡತೊಡಗಿದೆ. ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಡಗು, ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವು ಭಾಗ ತತ್ತರಿಸಿದ್ದು, ಒಂದೇ ದಿನ ಪ್ರತ್ಯೇಕ ಮಳೆ ಸಂಬಂಧಿ ಅವಘಡಗಳಲ್ಲಿ 10 ಜನ ಮೃತಪಟ್ಟಿದ್ದಾರೆ. ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಗೀಡಾಗಿದ್ದು, ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ. ರಾಜ್ಯ ಸರ್ಕಾರ ನೆರೆ ನಿಯಂತ್ರಣ, ಪರಿಹಾರ ಕ್ರಮಕ್ಕೆ ಮುಂದಾಗಿದೆ.
ಕೊಡಗು
ಸತತ ಮೂರನೇ ವರ್ಷ ಕೊಡಗು ಜಿಲ್ಲೆಗೆ ನೆರೆ ಬಂದಿದೆ. ತಲಕಾವೇರಿ ವ್ಯಾಪ್ತಿಯ ಬ್ರಹ್ಮಗಿರಿ ಬೆಟ್ಟ ಕುಸಿದ ಪರಿಣಾಮ ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ಸೇರಿ ಅವರ ಕುಟುಂಬದ ಐವರು ಕೊಚ್ಚಿ ಹೋಗಿದ್ದಾರೆ. ಜಿಲ್ಲೆಯ ಹಲವೆಡೆ ಭೂಕುಸಿತ ಸಂಭವಿಸಿ ಸಂಪರ್ಕ ಕಡಿತಗೊಂಡಿದೆ. ಭಾಗಮಂಡಲ ಸಂಪೂರ್ಣ ಜಲಾವೃತವಾಗಿದೆ.
ತುಂಗಭದ್ರಾ ಮತ್ತು ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದ ನದಿಪಾತ್ರದ ಜಿಲ್ಲೆಗಳಲ್ಲಿ ನೆರೆ ಭೀತಿ ಹೆಚ್ಚಾಗಿದೆ. ಆಲಮಟ್ಟಿ, ನಾರಾಯಣಪುರ ಜಲಾಶಯ ಭರ್ತಿಯಾಗಿದೆ. ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಮಳೆ ತೀವ್ರಗೊಂಡಿದ್ದು, ಬೆಳಗಾವಿ ಜಿಲ್ಲೆಯ 7 ಸೇತುವೆ ಮುಳುಗಡೆ ಆಗಿವೆ.
ಹಳೇ ಶಿವಮೊಗ್ಗ ಭಾಗದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಹೊಸನಗರ, ಶೃಂಗೇರಿ ಭಾಗದಲ್ಲಿ ಭಾರಿ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಚಾರ್ವಡಿ ಘಾಟ್​ನಲ್ಲಿ ಭೂಕುಸಿತವಾಗಿದೆ. ಶೃಂಗೇರಿ ಗಾಂಧಿ ಮೈದಾನ ಮುಳುಗಿದೆ. ಕಳಸ-ಹೊರನಾಡು ಸಂಪರ್ಕದ ಭದ್ರಾ ನದಿ ಹೆಬ್ಬಾಳೆ ಸೇತುವೆ ಮೇಲೆ ನೀರು ಹರಿಯುತ್ತಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುರುವಾರ ಮಳೆ ಆರ್ಭಟ ಕೊಂಚ ತಗ್ಗಿದೆ. ಪ್ರವಾಹದಿಂದಾಗಿ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಬೆಳಗ್ಗೆ ಮುಳುಗುವ ಭೀತಿಯಲ್ಲಿತ್ತು. ಬಳಿಕ ಮಳೆ ಕೊಂಚ ಕಡಿಮೆಯಾಗಿದೆ.
ಕಬಿನಿ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ನದಿಗೆ ಬಿಡುತ್ತಿದ್ದು, ಅಚ್ಚುಕಟ್ಟು ಭಾಗದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಕಪಿಲಾ ನದಿಗೆ 50 ಸಾವಿರ ಕ್ಯೂಸೆಕ್​ಗೂ ಅಧಿಕ ನೀರು ಬಿಟ್ಟಿದ್ದು, ಕೆಆರ್​ಎಸ್ ಒಳಹರಿವು ಹೆಚ್ಚಿದೆ.
10 ಸಾವಿರ ತಕ್ಷಣ ಪರಿಹಾರ
ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10 ಸಾವಿರ ರೂ., ಮನೆ ಪೂರ್ಣವಾಗಿ ಹಾನಿಯಾಗಿದ್ದರೆ 5 ಲಕ್ಷ ರೂ. ಹಾಗೂ ಭಾಗಶಃ ಹಾನಿಯಾಗಿದ್ದರೆ ಹಾನಿಯ ತೀವ್ರತೆಗೆ ಅನುಗುಣವಾಗಿ ಪರಿಹಾರ ವಿತರಿಸುವಂತೆ ಸಿಎಂ ಯಡಿಯೂರಪ್ಪ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚಿಸಿದ್ದಾರೆ.
ಕಾಡಿದ ಸರಣಿ ಸಾವಿನ ಆಘಾತ
ಕೊಡಗಿನಲ್ಲಿ ಅರ್ಚಕರ ಕುಟಂಬದ ಐವರು ಕುಸಿದ ಬೆಟ್ಟದಡಿ ಕೊಚ್ಚಿ ಹೋದರೆ, ಧಾರವಾಡ, ಹಾಸನ ಜಿಲ್ಲೆಯಲ್ಲಿ ತಲಾ ಒಬ್ಬರು ಹಳ್ಳ ಹಾಗೂ ನದಿ ಪಾಲಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಬ್ಬರು ಹಾಗೂ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯಲ್ಲಿ ಗೋಡೆ ಕುಸಿದು ಓರ್ವ ಮೃತಪಟ್ಟಿದ್ದಾನೆ.
ಸರ್ಕಾರ ಕೈಗೊಂಡ ಸಿದ್ಧತೆಗಳೇನು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
