ರಾಮನಗರಹಾರೋಹಳ್ಳಿ ತಾಲೂಕಿನ ಅಗರ ಗ್ರಾಮದಲ್ಲಿ ಸುವಾರು 35 ವರ್ಷಗಳಿಂದ ಬಹಿಷ್ಕಾರಕ್ಕೆ ಒಳಗಾಗಿದ್ದ ಮಹಿಳೆ ಗ್ರಾಮಕ್ಕೆ ವಾಪಸಾದ ಹಿನ್ನೆಲೆಯಲ್ಲಿ ಬಹಿಷ್ಕಾರ ಕುರಿತಂತೆ ಗ್ರಾಮದಲ್ಲಿ ಬುಧವಾರ ಶಾಂತಿಸಭೆ ಹಮ್ಮಿಕೊಳ್ಳಲಾಗಿತ್ತು.
ಮಾಧ್ಯಮಗಳಲ್ಲಿ ವರದಿ ಪ್ರಟಕಗೊಂಡ ನಂತರ ಬಹಿಷ್ಕಾರಕ್ಕೆ ಒಳಗಾಗಿದ್ದ ಸಾಕಮ್ಮ ಎಂಬಾಕೆ ಸ್ವಗ್ರಾಮಕ್ಕೆ ಹಿಂತಿರುಗಿದರು. ತಹಸೀಲ್ದಾರ್ ವಿಜಿಯಣ್ಣ ಮತ್ತು ಸವಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉಪನಿರ್ದೇಶಕ ಜಯಪ್ರಕಾಶ್ ಮತ್ತಿತರ ಅಧಿಕಾರಿಗಳು ಶಾಂತಿ ಸಭೆ ನಡೆಸಿ ಜಾಗೃತಿ ಮೂಡಿಸುವ ಕೆಲಸ ಮಾಡಿದರು. ಊರಿಗೆ ವಾಪಸಾದ ಸಾಕಮ್ಮ ಅವರನ್ನು ಗ್ರಾಮಸ್ಥರು ಹಾಗೂ ಅಧಿಕಾರಿಗಳು ಹೂವಿನಹಾರ ಹಾಕಿ ಸ್ವಾಗತಿಸಿದರು.
ತಹಸೀಲ್ದಾರ್ ವಿಜಿಯಣ್ಣ ಮಾತನಾಡಿ, ಬಹಿಷ್ಕಾರ ಹಾಕುವುದು ಅಪರಾಧವಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು. ತಪ್ಪು ವಾಡಬಾರದು ಎಂಬ ಉದ್ದೇಶದಿಂದ ಹಿಂದೆ ಹಿರಿಯರು ಈ ರೀತಿ ನಿಯಮ ವಾಡಿದ್ದರು. ಅದನ್ನು ಕೆಲವರು ದುರುಪಯೋಗ ವಾಡಿಕೊಂಡು ಬಹಿಷ್ಕಾರ ಹಾಕುವುದನ್ನು ದಂಧೆ ಮಾಡಿಕೊಂಡಿರುವುದು ಸರಿಯಲ್ಲ. ಭವಿಷ್ಯದಲ್ಲಿ ಇಂತಹ ಟನೆಗಳು ಮರುಕಳಿಸಬಾರದು ಎಂದು ಎಚ್ಚರಿಕೆ ನೀಡಿದರು. ಹಾರೋಹಳ್ಳಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನಟರಾಜ್ ಮುಂತಾದವರು ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 6 =
Remember me
