ಬೆಂಗಳೂರು:ಹೆಣ್ಣು ಭ್ರೂಣ ಹತ್ಯೆಯಂತಹ ನೀಚ ಕೃತ್ಯವನ್ನು ನಿಲ್ಲಿಸಲು ಸರ್ಕಾರ ಅದೆಷ್ಟೇ ಕಠಿಣ ಕಾನೂನು ಜಾರಿ ಮಾಡಿದರೂ ಭ್ರೂಣ ಹತ್ಯೆ ನಿಲ್ಲುತ್ತಿಲ್ಲ. ಇದು ನಿರಂತವಾಗಿ ನಡೆಯುತ್ತಲೇ ಇದೆ. ಮತ್ತೆ ಈ ವಿಚಾರ ಮುನ್ನಲೆಗೆ ಬಂದಿದೆ. ಕಾರಣ ಸುಮಾರು 2 ವರ್ಷಗಳಿಂದ ನಿರಂತರವಾಗಿ ಭ್ರೂಣ ಹತ್ಯೆ ಮಾಡುತ್ತಿದ್ದ ಐವರು ವೈದ್ಯರು ಸೇರಿ 9 ಜನರನ್ನು ಇದೀಗ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ನಿರಂತರವಾಗಿ ಭ್ರೂಣ ಹತ್ಯೆ ಮಾಡುತ್ತಿದ್ದ ಆರೋಪದ ಮೇಲೆ ಐವರು ವೈದ್ಯರು ಸೇರಿ, 9 ಜನರನ್ನು ಬಂಧಿಸಿದ್ದಾರೆ.
ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್ ಹಾಗೂ ವೈದ್ಯರಾದ ಡಾ. ತುಳಸಿರಾಮ್, ಡಾ. ಚಂದನ್ ಬಲ್ಲಾಳ್ ಮತ್ತು ಮೀನಾ, ಲ್ಯಾಬ್ ಟೆಕ್ನೀಶಿಯನ್ ನಿಸ್ಸಾರ್, ಖಾಸಗಿ ಆಸ್ಪತ್ರೆಯ ರಿಸಪ್ಷನಿಷ್ಟ್ ರೀಜ್ಮಾ ಬಂಧಿತ ಆರೋಪಿಗಳು.
ಭ್ರೂಣ ಹತ್ಯೆ ಮಾಡುತ್ತಿದ್ದ ಆರೋಪದ ಮೇಲೆ ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್ ಎಂಬುವವರನ್ನು ಬಂಧಿಸಲಾಗಿತ್ತು. ಇವರನ್ನು ವಿಚಾರಣೆಗೆ ಒಳಪಡಿಸಿದ ನಂತರ ಈ ಪ್ರಕರಣದ ಹಿಂದಿರುವ ವೈದ್ಯರ ಹೆಸರು ಕೇಳಿಬಂದಿತು. ಬಳಿಕ ಪೊಲೀಸರು ಚನ್ನೈ ಮೂಲದ ಡಾ ತುಳಸಿರಾಮ್, ಮೈಸೂರಿನ ಖಾಸಗಿ ಆಸ್ಪತ್ರೆಯ ರಿಸಪ್ಷನಿಷ್ಟ್ ರೀಜ್ಮಾ, ಡಾ.ಚಂದನ್ ಬಲ್ಲಾಳ್ ಮತ್ತು ಪತ್ನಿ ಮೀನಾ, ಲ್ಯಾಬ್ ಟೆಕ್ನೀಶಿಯನ್ ನಿಸ್ಸಾರ್ ಎಂಬವರನ್ನು ಬಂಧಿಸಿದ್ದಾರೆ.
ವ್ಯವಸ್ಥಿತವಾಗಿ ಕೃತ್ಯ ಎಸಗುತ್ತಿದ್ದ ಈ 9 ಮಂದಿ ಪ್ರತಿ ತಿಂಗಳು 20 ರಿಂದ 25 ಭ್ರೂಣ ಹತ್ಯೆ ಮಾಡುತ್ತಿದ್ದರು. ಕಳೆದ ಎರಡು ವರ್ಷಗಳಲ್ಲಿ ಸುಮಾರು 900ಕ್ಕೂ ಹೆಚ್ಚು ಭ್ರೂಣ ಹತ್ಯೆ ಮಾಡಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ. ಮೈಸೂರಿನ ಉದಯಗಿರಿಯಲ್ಲಿರುವ ಆಸ್ಪತ್ರೆಯೊಂದರಲ್ಲಿ ಈ ಕೃತ್ಯ ನಡೆಯುತ್ತಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಉತ್ತರಕಾಶಿ ಸುರಂಗ ಕುಸಿತ: ಅಡೆತಡೆಗಳ ನಡುವೆ ಸಾಂಪ್ರದಾಯಿಕ ರೀತಿ ಕೊರೆಯಲು ನಿರ್ಧಾರ, ಸುತ್ತಿಗೆಯಂತಹ ಉಪಕರಣಗಳ ಬಳಕೆ

‘ಇದು ಬರಿ ಬೆಳಕಲ್ಲ, ದರ್ಶನ’: ಕಾಂತಾರ ಪ್ರೀಕ್ವೆಲ್‌ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ರಿಷಬ್‌ ಶೆಟ್ಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − six =
Remember me
