ಬೆಂಗಳೂರು:ಸಹೋದರಿ ಮದುವೆಗೆ ಮಾಡಿಕೊಂಡಿದ್ದ ಲಕ್ಷಾಂತರ ರೂ. ಸಾಲ ತೀರಿಸಲು ಸರ ಕಳ್ಳತನ ಮಾಡುತ್ತಿದ್ದ ಫುಡ್ ಡೆಲಿವರಿ ಬಾಯ್​​ನನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಕೋಡಿಪಾಳ್ಯ ನಿವಾಸಿ ಸಂಜೀವ್​ಕುಮಾರ್ (32) ಬಂಧಿತ. ಆರೋಪಿಯಿಂದ 7 ಲಕ್ಷ ರೂ. ಮೌಲ್ಯದ 105 ಗ್ರಾಂ ತೂಕದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ:ಇದಕ್ಕಿಂತ ಇನ್ನೇನು ಬೇಕು ನಿಮಗೆ? ದಯವಿಟ್ಟು ಹೀಗಂತೂ ಮಾಡಬೇಡಿ! ನಟನ ಪರ ಫ್ಯಾನ್ಸ್​ ಮನವಿ
ಮದ್ದೂರಿನ ಕೆ.ಎಂ. ದೊಡ್ಡಿ ಮೂಲದ ಸಂಜೀವ್​ಕುಮಾರ್, ಕೆಲ ವರ್ಷಗಳಿಂದ ಕೋಡಿಪಾಳ್ಯದಲ್ಲಿ ಪತ್ನಿ ಜತೆ ವಾಸವಾಗಿದ್ದಾನೆ. ಜೊಮ್ಯಾಟೋದಲ್ಲಿ ಫುಡ್ ಡೆಲಿವರಿ ಬಾಯ್ ಆಗಿದ್ದ. ಒಂದೂವರೆ ವರ್ಷಗಳ ಹಿಂದೆ 5 ಲಕ್ಷ ರೂ. ಸಾಲ ಮಾಡಿ ಸಹೋದರಿಯ ಮದುವೆ ಮಾಡಿದ್ದ. ನಿಗದಿತ ಸಮಯದಲ್ಲಿ ಸಾಲ ತೀರಿಸಲಾಗದೆ, ಸಾಲಗಾರರ ಒತ್ತಡ ಹೆಚ್ಚಾಗಿತ್ತು. ಜತೆಗೆ ಮನೆ ನಿರ್ವಹಣೆಯೂ ಕಷ್ಟವಾಗಿತ್ತು. ಹೀಗಾಗಿ ಫುಡ್ ಡೆಲಿವರಿ ಜತೆಗೆ ಸರಕಳ್ಳತನ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಡಮಾನವಿಟ್ಟು ಸಾಲ ತೀರಿಸಿದ್ದ:ಕೋಡಿಪಾಳ್ಯ ಕ್ರಾಸ್​ನಲ್ಲಿ ಮಹಿಳೆಯೊಬ್ಬರು ಮಗಳನ್ನು ಶಾಲಾ ಬಸ್​ಗೆ ಹತ್ತಿಸಿ ವಾಪಸ್ ಹೋಗುವಾಗ ಸರ ಕಸಿದು ಪರಾರಿಯಾಗಿದ್ದ. ತನಿಖೆ ನಡೆಸಿ ಸಂಜೀವ್​ಕುಮಾರ್​ನನ್ನು ಬಂಧಿಸಲಾಗಿದೆ. ಈತನ ಬಂಧನದಿಂದ ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ 4 ಸರ ಕಳವು, ಆರ್.ಆರ್. ನಗರ ಮತ್ತು ಕುಂಬಳಗೋಡು ಠಾಣೆಯಲ್ಲಿ ದಾಖಲಾಗಿದ್ದ 3 ಸರ ಕಳವು ಪ್ರಕರಣಗಳು ಪತ್ತೆಯಾಗಿವೆ. ಈ ಹಿಂದೆ ಕಳವು ಮಾಡಿದ್ದ ಸರಗಳನ್ನು ಅಡಮಾನ ಇಟ್ಟು, ಒಂದಷ್ಟು ಸಾಲ ತೀರಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪಾಕಿಸ್ತಾನದಲ್ಲಿ ಜಸ್ಪ್ರೀತ್​ ಬುಮ್ರಾ! ಮಾಜಿ ಕ್ರಿಕೆಟಿಗ ವಾಸೀಮ್ ಅಕ್ರಂ ಹಂಚಿಕೊಂಡ ವಿಡಿಯೋ ಸಿಕ್ಕಾಪಟ್ಟೆ ವೈರಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 11 =
Remember me
