ಬೆಂಗಳೂರು: ಅನ್ನಭಾಗ್ಯ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರ ಹಣ ವರ್ಗಾವಣೆಗೆ ತಕ್ಷಣ ಕ್ರಮ ವಹಿಸಬೇಕು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು.
ವಿಧಾನಸೌಧದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಬಳಿಕ ಮಾತಮಾಡಿದರು.
ಅಕ್ಕಿ ಬದಲು ನೀಡುವ ಹಣ ಎಲ್ಲ ಫಲಾನುಭವಿಗಳಿಗೆ ತಲುಪಲು ಕ್ರಮ ತೆಗೆದುಕೊಳ್ಳಬೇಕು. ಸರ್ವರ್‌ಗಳ ಸಮಸ್ಯೆಗಳನ್ನು ಈ ಕೂಡಲೇ ಬಗೆಹರಿಸಬೇಕು ಎಂದು ಸೂಚಿಸಿದರು.
ಸಮರ್ಪಕವಾಗಿ ಅನ್ನ ಭಾಗ್ಯದ ಎಲ್ಲ ಸಾಮಗ್ರಿಗಳನ್ನು ಪಡಿತರದಾರರಿಗೆ ಸರಿಯಾದ ಸಮಯಕ್ಕೆ ತಲುಪಿಸಬೇಕು ಎಂದು ತಿಳಿಸಿದರು.ಕರ್ನಾಟಕ ರಾಜ್ಯವನ್ನು ಹಸಿವು ಮುಕ್ತವಾಗಿಸಲು ನಮ್ಮ ಮೊದಲ ಧ್ಯೇಯವಾಗಿರುವುದರಿಂದ ಆಹಾರ ಧಾನ್ಯಗಳನ್ನು ನಿಗದಿತ ಸಮಯದಲ್ಲಿ ತಲುಪಬೇಕು ಎಂದು ಹೇಳಿದರು.
ಸರ್ಕಾರದ ಕಾರ್ಯದರ್ಶಿ ಜಿ.ಸಿ.ಪ್ರಕಾಶ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಆಯುಕ್ತೆ ಕನಗವಲ್ಲಿ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿಯಂತ್ರಕರಾದ ಅನಿತಾ ಲಕ್ಷ್ಮಿ, ಆಹಾರ ಸರಬರಾಜು ನಿಗಮದ ನಿರ್ದೇಶಕ ಶ್ರೀನಿವಾಸಲು, ವ್ಯವಸ್ಥಾಪಕ ಪ್ರಸಣ್ಣಕುಮಾರ್,ಆಹಾರ ಆಯೋಗದ ಕಾರ್ಯದರ್ಶಿ ಸುಜಾತ ಹೊಸಮನಿ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − seven =
Remember me
