
ಬೆಂಗಳೂರು:ಆಹಾರ ಸುರಕ್ಷತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಅಸುರಕ್ಷಿತ ಆಹಾರ ತಡೆಗಟ್ಟಲು ಆಹಾರ ಸುರಕ್ಷತಾ ಇಲಾಖೆಯಿಂದ ಆ.30 ಮತ್ತು 31ರಂದು ಎರಡು ದಿನ ರಾಜ್ಯದಾದ್ಯಂತ ಆಂದೋಲನದ ರೀತಿಯಲ್ಲಿ ತಪಾಸಣೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಹಿಂದೆಂದು ಕಾಣದ ರೀತಿಯಲ್ಲಿ ಸತತವಾಗಿ ಆಹಾರ ಗುಣಮಟ್ಟ ಪರೀಕ್ಷಿಸುವ ಕಾರ್ಯವನ್ನ ಆಹಾರ ಸುರಕ್ಷತಾ ಇಲಾಖೆ ಕಳೆದ ಒಂದು ವರ್ಷದಿಂದ ನಡೆಸಿಕೊಂಡು ಬರುತ್ತಿದ್ದು, ಆಹಾರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.ಹೊಟೆಲ್ ರೆಸ್ಟೋರೆಂಟ್‌ಗಳಲ್ಲಿ ಆಹಾರ ಸುರಕ್ಷತೆ ಬಗ್ಗೆ ವಿಶೇಷ ತಪಾಸಣೆ ನಡೆಸಲಾಗುವುದು. ಅಲ್ಲದೇ ಮಾಂಸ, ಮೀನು, ಮೊಟ್ಟರಗಳ ಆಹಾರ ಮಾದರಿಗಳನ್ನ ಸಂಗ್ರಹಿಸಿ ತಪಾಸಣೆ ನಡೆಸಲಾಗುವುದು ಎಂದರು.ಜನರನ್ನ ಎಚ್ಚರಿಸುವುದು ಮುಖ್ಯ ಉದ್ದೇಶ. ಜೊತೆಗೆ ಅಸುರಕ್ಷಿತ ಆಹಾರವನ್ನ ತಯಾರಿಸುತ್ತಿರುವ ಉದ್ದಿಮೆದಾರರ ಮೇಲೂ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುತ್ತಿದೆ ಎಂದರು.ಸಾರ್ವಜನಿಕರು ತಾವು ಸೇವಿಸುವ ಆಹಾರದ ಗುಣಮಟ್ಟವನ್ನ ತಾವೇ ಪರಿಕ್ಷಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಹೊಟೆಲ್ ರೆಸ್ಟೊರೆಂಟ್, ಫುಡ್ ಪಾರ್ಕ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 3400 ಟೆಸ್ಟಿಂಗ್ ಕಿಟ್‌ಗಳನ್ನ ಅಳವಡಿಸಲು ನಿರ್ಧರಿಸಲಾಗಿದೆ. ಈಗಾಗಲೇ ಒಂದು ಸಾವಿರ ಕಿಟ್‌ಗಳು ಬಂದಿದ್ದು, ಶೀಘ್ರದಲ್ಲಿಯೇ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿವೆ ಎಂದರು.ಆಹಾರ ಉದ್ದಿಮೆದಾರರಿಗೆ ಪರವಾನಿಗೆ ನೀಡಲು ರಾಜ್ಯಕ್ಕೆ 106895 ಗುರಿ ನೀಡಲಾಗಿದ್ದು ಶೇ.68 ರಷ್ಟು ಪ್ರಗತಿ ಸಾಧಿಸಲಾಗಿದೆ. ಉಳಿದ ಆಹಾರ ಉದ್ದಿಮೆದಾರರು ನೊಂದಾಯಿಸಿಕೊಂಡು ಪರವಾನಿಗೆ ಪಡೆಯಬೇಕು. ಪರವಾನಿಗೆ ಪಡೆಯದೇ ಇದ್ದರೆ ಕಾನೂನು ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
266 ಮಾದರಿಗಳಲ್ಲಿ 239 ಮಾದರಿಗಳು ಸುರಕ್ಷಿತಹಣ್ಣು ಮತ್ತು ತರಕಾರಿಗಳ 385 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು, ವಿಶ್ಲೇಷಿಸಲಾದ 266 ಮಾದರಿಗಳಲ್ಲಿ 239 ಮಾದರಿಗಳು ಸುರಕ್ಷಿತ ಎಂದು ಮತ್ತು 27 ಮಾದರಿಗಳು ಕ್ರಿಮಿನಾಶಕಗಳ ಶೇಷಾಂಶಗಳು ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಮತ್ತು ಊ್ಠ್ಞಜ್ಠ ಜ್ಟಟಡಿಠಿ ಕಂಡುಬಂದಿರುವುದರಿಂದ ಅಸುರಕ್ಷಿತ ಎಂದು ವರದಿಯಾಗಿರುತ್ತವೆ. ಅಲ್ಲದೇ 211 ಪನ್ನೀರ್, 246 ಕೇಕ್, 67 ಕೋವಾದ ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿದ್ದು, ವಿಶ್ಲೇಷಣಾ ವರದಿಗಳು ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು ಎಂದರು.
ಇಲಾಖೆಯಿಂದ ಏಪ್ರಿಲ್‌ನಿಂದ ಇದುವರೆಗೆ 8418 ಸರ್ವೆ ಆಹಾರ ಮಾದರಿಗಳನ್ನು ಮತ್ತು 2593 ಕಾನೂನಾತ್ಮಕ ಆಹಾರ ಮಾದರಿಗಳನ್ನು ಹಾಗೂ ಜುಲೈನಲ್ಲಿ 2753 ಸರ್ವೆ ಆಹಾರ ಮಾದರಿಗಳನ್ನು ಮತ್ತು 711 ಕಾನೂನಾತ್ಮಕ ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿದೆ ಎಂದರು.ರಾಜ್ಯಾದ್ಯಂತ 106 ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥಗೊಂಡಿದ್ದು, 34 ಪ್ರಕರಣಗಳಲ್ಲಿ 1 ದಿನದ ಜೈಲು ಶಿಕ್ಷೆಯನ್ನು 05 ಪ್ರಕರಣಗಳಲ್ಲಿ 5, 10, 30, 45 ಮತ್ತು 60 ದಿನಗಳ ಜೈಲು ಶಿಕ್ಷೆಯನ್ನು (ತಲಾ 1 ಪ್ರಕರಣ), 04 ಪ್ರಕರಣಗಳಲ್ಲಿ 90 ದಿನದ ಜೈಲು ಶಿಕ್ಷೆಯನ್ನು ಮತ್ತು 02 ಪ್ರಕಣಗಳಲ್ಲಿ 6 ತಿಂಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ. 18 ಪ್ರಕರಣಗಳಲ್ಲಿ ನ್ಯಾಯಾಲಯದಿಂದ ದಂಡವನ್ನು ವಿಧಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.ಇದೇ ಸಂದರ್ಭದಲ್ಲಿ ಇಲಾಖೆಯ ಎಲ್ಲಾ ಆಹಾರ ಸುರಕ್ಷತಾಧಿಕಾರಿಗಳಿಗೆ ಆನ್‌ಲೈನ್ ಮೂಲಕ ಸಲ್ಲಿಕೆಯಾಗುವ ಪರವಾನಿಗೆ/ನೊಂದಣಿ ಅರ್ಜಿಗಳನ್ನು ಶೀಘ್ರುಗತಿಯಲ್ಲಿ ವಿಲೇವಾರಿ ಮಾಡಲು ಸಾಧ್ಯವಾಗುವಂತೆ ಮತ್ತು ತಪಾಸಣೆಯ ವಿವರಗಳನ್ನು ಆನ್‌ಲೈನ್ ಪೋರ್ಟಲ್‌ನಲ್ಲಿ ದಾಖಲಿಸಲು ಟ್ಯಾಬ್‌ಗಳನ್ನು ವಿತರಿಸಲಾಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − two =
Remember me
