ಬೆಂಗಳೂರು:ಕೇರಳದ ಶ್ರೀಕ್ಷೇತ್ರ ಶಬರಿಮಲೈಗೆ ತೆರಳುವ ಭಕ್ತಾದಿಗಳು, ಯಾತ್ರಾರ್ಥಿಗಳು, ಸಾರ್ವಜನಿಕರು https://sabarimalaonline.org ಪೋರ್ಟಲ್‍ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಂಡಿರುವವರಿಗೆ ಅನುಮತಿಸಿದ ನಂತರದಲ್ಲಿ ಮಾತ್ರ ಶಬರಿಮಲೈ ದರ್ಶನಕ್ಕೆ ಅವಕಾಶ ಇರುತ್ತದೆ.
ಪ್ರಥಮವಾಗಿ ಪ್ರತಿದಿನ ಒಂದು ಸಾವಿರ ಯಾತ್ರಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ವಾರಾಂತ್ಯದಲ್ಲಿ ಪ್ರತಿ ದಿನ ಎರಡು ಸಾವಿರ ಯಾತ್ರಾರ್ಥಿಗಳಿಗೆ ಮಾತ್ರ ಅವಕಾಶ ಇರುತ್ತದೆ.  ಅದರಂತೆ ಮೊದಲು ನೊಂದಣಿ ಮಾಡಿಕೊಂಡವರಿಗೆ ಮೊದಲ ಆದ್ಯತೆ ಇರುತ್ತದೆ.ಭೇಟಿ ನೀಡುವ 48 ಗಂಟೆ ಅವಧಿಯ ಮೊದಲು ಕೋವಿಡ್-19 ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯ. ಪ್ರವೇಶ ಸ್ಥಳದಲ್ಲಿ ಆ್ಯಂಟಿಜೆನ್​ ಟೆಸ್ಟ್​ಗೆ ಅವಕಾಶ ಕಲ್ಪಿಸಲಾಗಿದ್ದು ಅದರ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸಬೇಕಾಗಿರುತ್ತದೆ.
ಹತ್ತು ವರ್ಷಗಳ ಒಳಪಟ್ಟು ಮತ್ತು 60-65 ವರ್ಷಗಳಿಗೆ ಮೇಲ್ಪಟ್ಟವರಿಗೆ ಹಾಗೂ ಅನಾರೋಗ್ಯದ ಲಕ್ಷಣಗಳು ಇರುವಂತಹರಿಗೆ ಯಾತ್ರಾ ಪ್ರದೇಶಕ್ಕೆ ಅನುಮತಿ ಇರುವುದಿಲ್ಲ.  ಬಿಪಿಎಲ್ ಕಾರ್ಡ್, ಆಯುಷ್ಮಾನ್ ಕಾರ್ಡ್ ಇತ್ಯಾದಿ ಕಾರ್ಡ್ ಹೊಂದಿರುವವರು ಯಾತ್ರೆಗೆ ತೆರಳುವ ಸಮಯದಲ್ಲಿ ಅದನ್ನು ಹೊಂದಿರಬೇಕು.
ತುಪ್ಪದ ಅಭಿಷೇಕ, ಪಂಪಾನದಿ ಸ್ನಾನ, ಸನ್ನಿಧಾನಂನಲ್ಲಿ ರಾತ್ರಿ ತಂಗುವುದು ಹಾಗೂ ಪಂಪಾ ಮತ್ತು ಗಣಪತಿ ಕೋವಿಲ್‍ಗೆ ಅವಕಾಶ ಇರುವುದಿಲ್ಲ. ಯಾತ್ರಾರ್ಥಿಗಳ ಪ್ರಯಾಣಕ್ಕೆ ಎರುಮೆಲು ಮತ್ತು ವೇದಸಾರಿಕ್ಕರ ಮಾರ್ಗದಲ್ಲಿ ಮಾತ್ರ ಅವಕಾಶವಿರುತ್ತದೆ ಎಂದು ಧಾರ್ಮಿಕ ದತ್ತಿ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಅಲ್ಲೂ ಪ್ರತಿಭಟನೆ, ಇಲ್ಲೂ ಪ್ರತಿಭಟನೆ; ನಮಗೆ ಈ ಠಾಣೆಯೇ ಬೇಡ ಎಂದ ಪೊಲೀಸರು


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
