ಬೆಂಗಳೂರು:ಬಿಜೆಪಿ ಹಾಗೂ ಜೆಡಿಎಸ್ ಶಾಸಕರ ವಿರೋಧದ ನಡುವೆಯೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆಯಿತು.
ಸರ್ಕಾರಿ ಜಾಗದಲ್ಲಿ ಕಟ್ಟಿ 12 ವರ್ಷ ಅಸ್ತಿತ್ವದಲ್ಲಿರುವ ಕಟ್ಟಡಗಳಿಗೆ ದರ ನಿಗದಿಪಡಿಸಿ ಸ್ವಾಧೀನ ಕೊಡುವ ಈ ವಿಧೇಯಕಕ್ಕೆ ಬಿಜೆಪಿಯ ಕೆ.ಜಿ. ಬೋಪಯ್ಯ ಹಾಗೂ ಜೆಡಿಎಸ್​ನ ಎ.ಟಿ. ರಾಮಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದರು.
ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ವಿಧೇಯಕ ಮಂಡಿಸುತ್ತಲೇ ಆಕ್ಷೇಪ ವ್ಯಕ್ತಪಡಿಸಿದ ರಾಮಸ್ವಾಮಿ, ಈ ತಿದ್ದುಪಡಿ ಹಿಂದೆ ಬಡವರ ಹಿತ ಇಲ್ಲ. ಅಕ್ರಮದಾರರ ಹಿತ ಇದೆ. ಇದು ಬಿಬಿಎಂಪಿ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ತರಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಭೂಮಿ ಬೆಲೆ ಗಗನಕ್ಕೆ ಹೋಗಿದೆ. ಮಾರ್ಗಸೂಚಿ ದರದ ಶೇ. 10, 20, 30, 40, 50 ಕೊಟ್ಟರೆ ಹೇಗೆ? ವಿಧೇಯಕ ವಾಪಸ್ ತೆಗೆದುಕೊಳ್ಳಿ ಎಂದು ಆಗ್ರಹಿಸಿದರು.
ಮಧ್ಯ ಪ್ರವೇಶಿಸಿದ ಕಂದಾಯ ಸಚಿವ ಆರ್. ಅಶೋಕ್, ಇಂತಹ ಕಟ್ಟಡಗಳಿಗೆ ಎಲ್ಲ ಸವಲತ್ತು ನೀಡಲಾಗಿದೆ. ಆದರೆ, ಸರ್ಕಾರಕ್ಕೆ ನಯಾ ಪೈಸೆ ತೆರಿಗೆ ಬರುತ್ತಿಲ್ಲ. ಇನ್ನೂ 20-30 ವರ್ಷವಾದರೂ ಅವರು ಹಾಗೆಯೇ ಇರುತ್ತಾರೆ ಎಂದು ಗಮನ ಸೆಳೆದರು. ಅದಕ್ಕೆ ಪ್ರತಿಕ್ರಿಯಿಸಿದ ಮಾಧುಸ್ವಾಮಿ, ಅನೇಕ ವರ್ಷಗಳಿಂದ ಈ ಸಮಸ್ಯೆ ಹಾಗೆಯೇ ಇದೆ. ಇನ್ನು ಎಷ್ಟು ವರ್ಷ ಹೀಗೆ ಬಿಡಲು ಆಗುತ್ತದೆ? ಎಷ್ಟೋ ಏರಿಯಾದಲ್ಲಿ ಮಾರುಕಟ್ಟೆ ದರಕ್ಕಿಂತ ಮಾರ್ಗಸೂಚಿ ದರವೇ ಜಾಸ್ತಿ ಇದೆ ಎಂದು ಸಮರ್ಥಿಸಿಕೊಂಡರು.
ಮಧ್ಯ ಪ್ರವೇಶಿಸಿದ ಬೋಪಯ್ಯ, 2030 ನಿವೇಶನದ ಕಟ್ಟಡಕ್ಕೆ ಮಾರ್ಗಸೂಚಿ ದರಕ್ಕಿಂತ ಹೆಚ್ಚು ಬೆಲೆ ನಿಗದಿಪಡಿಸುವಂತೆ ತಮ್ಮ ಸಮಿತಿ ಶಿಫಾರಸು ಮಾಡಿತ್ತು. ಅದೆಲ್ಲವನ್ನೂ ಗಾಳಿಗೆ ತೂರಿ ಈ ಬಿಲ್ ತರಲಾಗಿದೆ ಎಂದರು. ನಿಗದಿ ಮಾಡಿರುವ ದರ ಕಡಿಮೆ ಆಗಿದೆ. ಶೇ.30 ಜಾಸ್ತಿ ಮಾಡಿ ಎಂದು ಜೆಡಿಎಸ್​ನ ಶಿವಲಿಂಗೇಗೌಡ ಮತ್ತಿತರರು ಸಲಹೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 12 =
Remember me
