ಬೆಂಗಳೂರು:ನಾಳೆಯಿಂದಲೇ ಟೋಲ್ ಸಂಗ್ರಹಿಸಲಾಗುವುದು ಎಂದು ಘೋಷಿಸಲಾಗಿದ್ದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಇತ್ತೀಚಿನ ಬೆಳವಣಿಗೆ ಪ್ರಕಾರ ಟೋಲ್​ ಸಂಗ್ರಹ ಸದ್ಯಕ್ಕಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ನಾಳೆ ಬೆಳಗ್ಗೆ 8 ಗಂಟೆಯಿಂದ ಸಂಗ್ರಹಿಸಲಾಗುವುದು ಎಂಬ ಮಾಹಿತಿ ಜೊತೆಗೆ ಟೋಲ್​ ಶುಲ್ಕದ ವಿವರ ಪ್ರಕಟಗೊಂಡಿತ್ತು. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಆಕ್ಷೇಪವೂ ವ್ಯಕ್ತವಾಗಿತ್ತು. ಇದರ ಬೆನ್ನಿಗೇ ಸದ್ಯಕ್ಕೆ ಟೋಲ್ ಸಂಗ್ರಹಿಸುವುದಿಲ್ಲ ಎಂಬ ಘೋಷಣೆ ಅಚ್ಚರಿ ಮೂಡಿಸಿದೆ.
ಇದನ್ನೂ ಓದಿ:ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಸರ್ವಿಸ್ ರಸ್ತೆಗಳ ಕಾಮಗಾರಿ ಪೂರ್ಣಗೊಳ್ಳುವವರೆಗೂ ಟೋಲ್ ಸಂಗ್ರಹ ಆರಂಭಿಸುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸದ್ಯಕ್ಕೆ ಟೋಲ್ ಇಲ್ಲ ಎಂಬ ಈ ಘೋಷಣೆಯಿಂದ ಸಾರ್ವಜನಿಕರು ಸಂತಸಗೊಂಡಿದ್ದು, ನಿರಾಳರಾಗಿದ್ದಾರೆ.
Toll collection, Deferred till the completion of service roads.pic.twitter.com/kDWIMvt5y9
— Pratap Simha (@mepratap)February 27, 2023

ಇದೋ ಬಂದಿದೆ ಕಿಸ್ಸಿಂಗ್ ಡಿವೈಸ್; ಚುಂಬಿಸುವ ಇಬ್ಬರು ಎಷ್ಟೇ ದೂರದಲ್ಲಿದ್ದರೂ ಸಿಗುವುದು ನೈಜ ಮುತ್ತಿನ ಗಮ್ಮತ್ತು!

ಕೊಲೆಯಾದ ರೂಪದರ್ಶಿಯ ಕಾಲು ಫ್ರಿಡ್ಜ್​ನಲ್ಲಿತ್ತು!; ರುಂಡಕ್ಕಾಗಿ ಪೊಲೀಸರ ಹುಡುಕಾಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
