ಬೆಂಗಳೂರುಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕೆಆರ್‌ಐಇಎಸ್) ವ್ಯಾಪ್ತಿಯ ಶಾಲೆಗಳಲ್ಲಿ ಕಾರ್ಯನಿರ್ವಹಿಸಲು ಕೆಪಿಎಸ್ಸಿ ನಡೆಸಿರುವ ಸ್ಪರ್ಧಾತ್ಮಕ ಪರೀಕ್ಷೆಯ ಸಮಾಜ ವಿಜ್ಞಾನ ವಿಷಯದ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಹುದ್ದೆ ಆಕಾಂಕ್ಷಿಕಗಳು ಒತ್ತಾಯಿಸಿದ್ದಾರೆ.
ಈ ಸಂಬಂಧ ಇತ್ತೀಚೆಗೆ ಕೆಪಿಎಸ್ಸಿ ಕಾರ್ಯದರ್ಶಿ ಅವರನ್ನು ಭೇಟಿ ಮಾಡಿರುವ ಆಕಾಂಕ್ಷಿಗಳು, ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸಿ ಮುಂದಿನ ಶೈಕ್ಷಣಿಕ ವರ್ಷದಿಂದ ಕಾರ್ಯ ನಿರ್ವಹಿಸಲು ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಸಮಾಜ ವಿಜ್ಞಾನ ವಿಷಯದ ಹೆಚ್ಚುವರಿ ಪಟ್ಟಿಯನ್ನು ಜ.18ರಂದು ಬಿಡುಗಡೆಗೊಳಿಸಿ 2 ತಿಂಗಳು ಕಳೆದಿದೆ. ಆದರೆ, ಈ ವರೆಗೂ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರಕಟಿಸಿಲ್ಲ. ಇದರಿಂದ ಹೆಚ್ಚುವರಿ ಪಟ್ಟಿಯಲ್ಲಿರುವ ಎಲ್ಲ ಅಭ್ಯರ್ಥಿಗಳಿಗೆ ಸಮಸ್ಯೆಯಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ಪರೀಕ್ಷೆ ನಡೆಸಿರುವ ವಿವಿಧ 9 ವಿಷಯಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು 2023ರ ಆಗಸ್ಟ್ 17ರಂದು ಬಿಡುಗಡೆ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಕಳೆದ 3 ತಿಂಗಳಿನಿಂದ ಸೇವೆ ಸಲ್ಲಿಸುತ್ತಿದ್ದಾರೆ. ಸಮಾಜ ವಿಜ್ಞಾನ ವಿಷಯದ ಅಭ್ಯರ್ಥಿಗಳಿಗೆ ಮಾತ್ರ ಅನ್ಯಾಯವಾಗಿದ್ದು, ಕೂಡಲೇ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
