ಬೆಂಗಳೂರು:ಅರಣ್ಯ ಪ್ರದೇಶಗಳಿಂದ ಪ್ರಾಣಿಗಳು ಬಾರದಂತೆ ಬ್ಯಾರಿಕೇಡ್ ನಿರ್ಮಿಸಲು ಹೆಚ್ಚಿನ ಅನುದಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಅರಣ್ಯ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿರುವ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು ಇಲಾಖೆಯ ಹೆಚ್ಚಿನ ಅನುದಾನದ ಬೇಡಿಕೆ ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.ಮಾನವ- ವನ್ಯಮೃಗಗಳ ಸಂಘರ್ಷಗಳನ್ನು ತಡೆಯುವ ಕೆಲಸವಾಗಬೇಕು. ಕಾಡು ಪ್ರಾಣಿಗಳಿಗೆ ಮೇವು, ಕುಡಿಯುವ ನೀರನ್ನು ಅರಣ್ಯ ಪ್ರದೇಶದೊಳಗೆ ಲಭ್ಯವಾಗಿಸುವುದು ಅರಣ್ಯ ಇಲಾಖೆಯ ಜವಾಬ್ದಾರಿಯಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.ಹೆಚ್ಚಿನ ಸಸಿಗಳನ್ನು ನೆಡುವ ಮೂಲಕ ಕಾಡು ಬೆಳೆಸುವ ಕೆಲಸವಾಗಬೇಕು. ಅರಣ್ಯ ಪ್ರದೇಶದ ವಿಸ್ತೀರ್ಣಗೊಂಡರೆ ರಾಜ್ಯಕ್ಕೆ ಹೆಚ್ಚಿನ ಅನುಕೂಲವಾಗುತ್ತದೆ. ಕಾಡುಗಳಲ್ಲಿ ಹುಲಿ, ಆನೆಗಳ ಸಂಖ್ಯೆಯಲ್ಲಿ ಹೆಚ್ಚಳ ಕಾಣುತ್ತಿರುವುದು ಸಂತೋಷದ ವಿಷಯ. ಆದರೆ ಕಾಡುಪ್ರಾಣಿಗಳು ಜನರಿರುವ ಪ್ರದೇಶಕ್ಕೆ ಬರುತ್ತಿದ್ದು, ಅರಣ್ಯ ಇಲಾಖೆಯವರು ಹಾಗೂ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದರು.ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ. ರಾಜ್ಯದ ಭೂ ಪ್ರದೇಶದಲ್ಲಿ ಶೇ. 20 ರಷ್ಟು ಮಾತ್ರ ಅರಣ್ಯ ಪ್ರದೇಶವಿದ್ದು, ಕನಿಷ್ಠ ಶೇ. 33 ಕ್ಕೆ ಅರಣ್ಯ ಪ್ರದೇಶದ ವಿಸ್ತರಣೆಯಾಗಬೇಕಿದೆ. ಆಗಮಾತ್ರ ಹವಾಮಾನ ವೈಪರೀತ್ಯಗಳನ್ನು ತಡೆಯಲು ಸಾಧ್ಯ ಎಂದು ಹೇಳಿದರು.
ಅರಣ್ಯ ಒತ್ತುವರಿ ಕಾರ್ಯಾಚರಣೆ ನಡೆದಿದೆ. ದಲಿತರು, ಸಣ್ಣಪುಟ್ಟವರ ಒತ್ತುವರಿ ಮಾಡಿಕೊಂಡಿರುತ್ತಾರೆ. ಆದರೆ, ದೊಡ್ಡ ಒತ್ತುವರಿದಾರರ ತೆರವು ಮೊದಲ ಆದ್ಯತೆಯಾಗಿರಲಿ. ಒತ್ತುವರಿ ತೆರವು ಮಾಡಿ ಅರಣ್ಯ ಬೆಳೆಸುವ ಕೆಲಸ ಆಗಬೇಕು, ಅರಣ್ಯ ಪ್ರದೇಶ ವಿಸ್ತಾರವಾಗಬೇಕೆಂದು ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಕರೆ ನೀಡಿದರು.ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ ಖರ್ಗೆ, ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್, ಸ್ಮಿತಾ ಬಿಜ್ಜೂರ್, ಸಂಜಯ್ ಬಿಜ್ಜೂರ್ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.2020 ಹಾಗೂ 2021ನೇ ಸಾಲಿನ ಗೌರವಕ್ಕೆ ಭಾಜನರಾಗಿದ್ದ 50 ಅಧಿಕಾರಿ ಸಿಬ್ಬಂದಿಗೆ ಸಿಎಂ ಸಿದ್ದರಾಮಯ್ಯ ಇದೇ ವೇಳೆ ಪದಕ ಪ್ರದಾನ ಮಾಡಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:sixteen + four =
Remember me
