ಬೆಂಗಳೂರು:ಎತ್ತಿನಹೊಳೆ ಯೋಜನೆಗೆ ಅಗತ್ಯವಾಗಿರುವ 500 ಎಕರೆ ಹಸ್ತಾಂತರ ಮಾಡಿಕೊಡಲು ಅರಣ್ಯ ಇಲಾಖೆ ಒಪ್ಪಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಸಂಬಂಧಪಟ್ಟ ಇಲಾಖೆಗಳ ಪ್ರಮುಖ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಎತ್ತಿನಹೊಳೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ ಕೆಲಸ ತ್ವರಿತ ಗತಿಯಲ್ಲಿ ನಡೆಸಲು ಕಂದಾಯ ಸಚಿವ ಕೃಷ್ಣ ಭೈರೇಗೌಡ, ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ದೆಹಲಿ ಪ್ರತಿನಿಧಿ ಟಿ.ಬಿ ಜಯಚಂದ್ರ, ಕಂದಾಯ, ಅರಣ್ಯ, ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇವೆ ಎಂದರು.
ಈ ಯೋಜನೆಗೆ ಅಗತ್ಯವಿರುವ ಜಾಗವನ್ನು ಅರಣ್ಯ ಇಲಾಖೆ ನೀಡುತ್ತಿದ್ದು, ಇದಕ್ಕೆ ಪರ್ಯಾಯವಾಗಿ ಕಂದಾಯ ಇಲಾಖೆಯು ಅರಣ್ಯ ಇಲಾಖೆಗೆ 500 ಎಕರೆ ಜಾಗ ನೀಡಲಿದೆ. ಈ ಪ್ರಕ್ರಿಯೆಯನ್ನು ಕಾನೂನು ಚೌಕಟ್ಟಿನಲ್ಲಿ ಪೂರ್ಣಗೊಳಿಸುತ್ತೇವೆ. ಈ ಯೋಜನೆಗಳ ಕಾಮಗಾರಿಗೆ ಎದುರಾಗಿರುವ ಸಮಸ್ಯೆಗಳನ್ನು ಅಧಿಕಾರಿಗಳು ಗುರುತಿಸಿದ್ದು, ಅವುಗಳಿಗೆ ಪರಿಹಾರ ಹುಡುಕಲು ಸಭೆಯಲ್ಲಿ ರ್ಚಚಿಸಿ ದ್ದೇವೆ ಎಂದರು.
260 ಕಿ.ಮೀ ಉದ್ಧದ 20 ಸ್ಥಳಗಳಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು ಇವೆ. ಈ ಯೋಜನೆಗೆ ಅರಣ್ಯ ಇಲಾಖೆ ಅನುಮತಿ ಅಗತ್ಯವಿದ್ದ ಕಾರಣ ಅರಣ್ಯ ಸಚಿವರು ಹಾಗೂ ಇಲಾಖೆ ಸಚಿವರ ಜತೆ ಚರ್ಚೆ ಮಾಡಿದ್ದೇವೆ. ಈ ವಿಚಾರವಾಗಿ ಕಂದಾಯ, ನೀರಾವರಿ ಹಾಗೂ ಅರಣ್ಯ ಇಲಾಖೆ ಸೇರಿ ಒಟ್ಟಾಗಿ ಜಂಟಿ ಸರ್ವೆ ಮಾಡುತ್ತಿದ್ದೇವೆ. ಅರಣ್ಯ ಇಲಾಖೆಗೆ ಬದಲಿ ಜಮೀನು ನೀಡಲು ಕಂದಾಯ ಇಲಾಖೆ ಒಪ್ಪಿದೆ. ಕೂಡಲೇ ಈ ಕಾಮಗಾರಿ ನಡೆಸಲು ಮನವಿ ಮಾಡಿದ್ದೇವೆ. ರೈತರಿಗೆ 51 ಕೋಟಿ ರೂ ಪರಿಹಾರ ನೀಡಬೇಕಾಗಿದ್ದು, ಈ ಪೈಕಿ 10 ಕೋಟಿ ಹಣ ನೀಡಲಾಗಿದ್ದು, 41 ಕೋಟಿ ಬಾಕಿ ಇದೆ. ಈ ಜಾಗದ ವಿಚಾರವಾಗಿ ಅರಣ್ಯ ಹಾಗೂ ಕಂದಾಯ ಇಲಾಖೆ ನಡುವೆ ಗೊಂದಲವಿದೆ. ಹೀಗಾಗಿ ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದರು.
ದೊಡ್ಡಬಳ್ಳಾಪುರದ ಲಕ್ಕೇನಹಳ್ಳಿಯಲ್ಲಿ ಸಮತೋಲಿತ ಜಲಾನಯನ ಯೋಜನೆ ಬಾಕಿ ಇದ್ದು ಇದರ ಕಾಮಗಾರಿ ಆರಂಭಿಸಲು ತಯಾರಿ ಮಾಡಲಾಗಿದೆ. ಮುಂದಿನ ತಿಂಗಳ ಒಳಗಾಗಿ ನೀರನ್ನು ಹೊರತರಲು ನಿರ್ದೇಶನ ನೀಡಲಾಗಿದೆ. ಮೊದಲ ಹಂತದಲ್ಲಿ 48 ಕಿ.ಮೀ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ ಎಂದರು. ಈ ಯೋಜನೆಯಿಂದ ಮತ್ತಷ್ಟು ಪ್ರಯೋಜನ ಪಡೆಯುವ ಉದ್ದೇಶದೊಂದಿಗೆ ಇದರ ಜತೆಗೆ ಸಮುದ್ರ ಸೇರುತ್ತಿರುವ ನೀರನ್ನು ಹೇಗೆ ಎಲ್ಲೆಲ್ಲಿ ಹಿಡಿದಿಟ್ಟು ಬಳಸಿಕೊಳ್ಳಬಹುದು ಎಂಬುದರ ಬಗ್ಗೆ ಅಧ್ಯಯನ ನಡೆಸಲು ಉನ್ನತ ಮಟ್ಟದ ತಾಂತ್ರಿಕ ಸಮಿತಿ ರಚಿಸಲಿದ್ದೇವೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 20 =
Remember me
